ಮಂಗಳೂರು | ಜೈಲಿನಲ್ಲಿ ‘ಫುಡ್ ಪಾಯಿಸನ್‌’; 45 ಕೈದಿಗಳು ಅಸ್ವಸ್ಥ; ಓರ್ವನ ಸ್ಥಿತಿ ಗಂಭೀರ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನೀಡಲಾಗಿದ್ದ ಆಹಾರ ಸೇವಿಸಿ ಸುಮಾರು 45 ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಿಗೆ ಫೈಡ್‌ ಪಾಯಿಸನ್ ಆಗಿದೆ ಎಂದು ಹೇಳಲಾಗಿದೆ. ಅಸ್ವಸ್ಥರಾಗಿರುವ ವಿಚಾರಣಾಧೀನ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

- Advertisement -

ಜೈಲಿನಲ್ಲಿ ಬುಧವಾರ ಸಂಜೆ ನೀಡಲಾಗಿದ್ದ ಆಹಾರ ಸೇವಿಸಿದ ಬಳಿಕ, ಹಲವಾರು ವಿಚಾರಣಾಧೀನ ಕೈದಿಗಳು ಹೊಟ್ಟೆ ನೋವಿಗೆ ತುತ್ತಾಗಿದ್ದಾರೆ. ಹಲವರಿಗೆ ವಾಂತಿಯಾಗಿದ್ದು, ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆ್ಯಂಬುಲೆನ್ಸ್, ಪೊಲೀಸ್ ವಾಹನಗಳಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಕಾರಾಗೃಹದಲ್ಲಿ ಸುಮಾರು 350 ಮಂದಿ ಕೈದಿಗಳಿದ್ದಾರೆ. ನಾನಾ ಬ್ಯಾರೆಕ್‌ಗಳಲ್ಲಿದ್ದ ಕೈದಿಗಳು ಅಸ್ವಸ್ಥಗೊಂಡಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥಗೊಂಡಿದ್ದ ಕೈದಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ, ಕಾರಾಗೃಹಕ್ಕೆ ತೆರಳಿ, ಕೈದಿಗಳಿಗೆ ನೀಡಲಾಗಿದ್ದ ಆಹಾರದ ಮಾದರಿಗಳನ್ನು ಸಂಗ್ರಹಿಸಿದ್ದಾರೆ ಎಂದು ವರದಿಯಾಗಿದೆ.

ಆಹಾರದಲ್ಲಿ ಕಲಬೆರಕೆಯಾಗಿದೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...