ಮಂಗಳೂರು | ವಿದೇಶಿ ಉದ್ಯೋಗದ ಹೆಸರಿನಲ್ಲಿ ವಂಚನೆ; ಇಬ್ಬರು ಅರೆಸ್ಟ್

Date:

ವಿದೇಶದಲ್ಲಿ ಉದ್ಯೋಗ ಕೊಡಿಸಲು ವೀಸಾ ಕೊಡಿಸುವುದಾಗಿ ಹೇಳಿ ಹಲವು ಮಂದಿಯಿಂದ ಹಣ ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು‌ ಮಂಗಳೂರು ಕಾವೂರು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 ಕೋಟಿಗೂ ಅಧಿಕ ಹಣವನ್ನು ಪಡೆದುಕೊಂಡು ವಂಚಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಜನರಿಂದ ಪಾಸ್‌ಪೋರ್ಟ್‌ಗಳನ್ನು ಪಡೆದುಕೊಂಡು ಮನೆಯಲ್ಲಿ ಅಕ್ರಮವಾಗಿ ಇರಿಸುತ್ತಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಿಂದ 24 ಪಾಸ್‌ಪೋರ್ಟ್‌ಗಳು, 43 ಗ್ರಾಂ ಬಂಗಾರ (ಅಂದಾಜು ಮೌಲ್ಯ 4,30,000 ರೂ.) ಮತ್ತು 2 ಮೊಬೈಲ್‌ಗಳನ್ನು ಬೆಂಗಳೂರಿನಲ್ಲಿ ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

WhatsApp Image 2025 10 30 at 3.27.32 PM

ಇದನ್ನೂ ಓದಿ: ಮಂಗಳೂರು | ತುಳು ಮೌಖಿಕ ಸಾಹಿತ್ಯವು ಇತಿಹಾಸದ ಕೊಂಡಿ: ಡಾ ತುಕಾರಾಂ ಪೂಜಾರಿ

ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ ಮಾರ್ಗದರ್ಶನದಲ್ಲಿ ಕಾವೂರು ಠಾಣೆಯ ಇನ್‌ಸ್ಪೆಕ್ಟರ್ ರಾಘವೇಂದ್ರ ಎಂ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ, ಸಿಬ್ಬಂದಿಗಳಾದ ನಾಗರತ್ನ, ರಾಘವೇಂದ್ರ, ಪ್ರವೀಣ್, ರಿಯಾಝ್ ಕಾರ್ಯಾಚರಣೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...