ಮಂಗಳೂರು | ಗಾಂಜಾ ಮಾರಾಟ: ಆರೋಪಿಗಳ ಬಂಧನ; 8 ಲಕ್ಷ ಮೌಲ್ಯದ ಮಾದಕವಸ್ತು ವಶಕ್ಕೆ

Date:

ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೈಡ್ರೋವೀಡ್ ಗಾಂಜಾ, ಚರಸ್, ಗಾಂಜಾದಂತಹ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

- Advertisement -

ತೈಸಿರ್ ಇಸ್ಮಾಯಿಲ್ ಹುಸೈನ್ ಹಾಗೂ ರೋಯಸ್ಟನ್ ಕ್ಸವಿಯರ್ ಲೋಬೋ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 8 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಬೆಂಗಳೂರಿನಿಂದ ಗಾಂಜಾ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಶಿವಭಾಗ್ 5 ನೇ ಕ್ರಾಸ್ ರಸ್ತೆ ಬಳಿ ದಾಳಿ ಮಾಡಿದ ಪೊಲೀಸರು ಲಕ್ಷಾಂತರ ಮೌಲ್ಯದ ಹೈಡ್ರೋವೀಡ್, ಚರಸ್, ಗಾಂಜಾ ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

WhatsApp Image 2025 03 29 at 1.09.57 PM

ಆರೋಪಿಗಳು ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನ

ಕಾರ್ಯಾಚರಣೆಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ ಗೋಯಲ್ ಮತ್ತು ಉಪ ಪೊಲೀಸ್ ಆಯುಕ್ತ ಕೆ.ರವಿಶಂಕರ್ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ ಎಂ, ಪಿಎಸ್ಐ ನರೇಂದ್ರ, ಎಎಸ್ಐ ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...