ಮಂಗಳೂರು | ಹೋಮ್ ನರ್ಸ್ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ: ಸುಳಿವು ಸಿಕ್ಕಲ್ಲಿ ಕಂಕನಾಡಿ ನಗರ ಠಾಣೆಗೆ ಸಂಪರ್ಕಿಸುವಂತೆ ಸೂಚನೆ

Date:

ಮಂಗಳೂರು ನಗರದ ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ವಾಸವಿದ್ದು, ಹೋಮ್‌ ನರ್ಸ್‌ ಕೆಲಸ ಮಾಡುತ್ತಿದ್ದ ಹಾವೇರಿ ಮೂಲದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಹಾವೇರಿ ಮೂಲದ ಸೋಮಶೇಖರ್ ನಲವಾಗಳ(53) ಎಂಬುವವರು ಕಾಣೆಯಾಗಿರುವ ವ್ಯಕ್ತಿ. ಇವರು ಹೋಮ್ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದು, ಮಂಗಳೂರಿನ ವಿವಿಧ ಆಸ್ಪತ್ರೆ ಹಾಗೂ ಪುತ್ತೂರು ಕಡೆಗಳಲ್ಲಿ ಮನೆಯಲ್ಲಿರುವ ರೋಗಿಗಳ ಉಪಚಾರ ಮಾಡುವ ಕೆಲಸಕ್ಕೆ ಹೋಗುತ್ತಿದ್ದರು. 2023ರ ಫೆಬ್ರವರಿ 28ರಂದು ಕೆಲಸಕ್ಕೆಂದು ಹೇಳಿ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಬಾಲಕಾರ್ಮಿಕ ರಕ್ಷಣೆ ಕಾರ್ಯಾಚರಣೆ: ಮೂವರು ಕಿಶೋರ ಕಾರ್ಮಿಕರು ಪತ್ತೆ

ಕಾಣೆಯಾದವರ ಚಹರೆ: 5.5 ಅಡಿ ಎತ್ತರ, ಎಣ್ಣೆಗೆಂಪು ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈ ಕಟ್ಟು, ಬಲಗೈಯಲ್ಲಿ ನಂದ ಹೆಸರಿನ ಟ್ಯಾಟೂ ಇದೆ. ಕಪ್ಪು ಮಿಶ್ರಿತ ಬಿಳಿ ತಲೆಕೂದಲು, ತೆಳು ಗಡ್ಡ ಮತ್ತು ಮೀಸೆ ಹೊಂದಿರುತ್ತಾರೆ. ಕಾಣೆಯಾದ ದಿನ ಉದ್ದಗೆರೆಗಳಿರುವ ಕಪ್ಪು ಬಣ್ಣದ ಅರ್ಧತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಂಕನಾಡಿ ನಗರ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...