ಮಂಗಳೂರು | ಹನಿಟ್ರ್ಯಾಪ್ ಕೇಸ್ ಬಯಲು: ಉದ್ಯಮಿಯನ್ನು ಬೆದರಿಸಿ 44.80 ಲಕ್ಷ ರೂ. ದೋಖಾ

Date:

ಮಂಗಳೂರು ನಗರದಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಕೇರಳ ಮೂಲದ ಗಲ್ಫ್‌ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ ಮಾಡಿ 44.80 ಲಕ್ಷ ರೂ.ಗಳನ್ನು ವಂಚಿಸಿದೆ ಎಂದು
ಬೆಂಗಳೂರಿನ ನ್ಯಾಯವಾದಿ ಸೌದಾ ಆರೋಪಿಸಿದ್ದಾರೆ.

- Advertisement -

ಮಂಗಳೂರಿನ ವುಡ್‌ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೇರಳದ 53 ವರ್ಷದ ಮುಹಮ್ಮದ್ ಅಶ್ರಫ್ ತಾವರಕಡನ್ ಎಂಬುವವರು ಸೌದಿಯಲ್ಲಿ ಉದ್ಯೋಗದಲ್ಲಿದ್ದಾರೆ. ಅವರಿಗೆ ಬಶೀರ್ ಕಡಂಬು, ಸಫಿಯಾ ಮಾಣಿ ಮತ್ತು ಇತರ ಆರೋಪಿಗಳು ಸೆ.24ರಂದು ಮಂಗಳೂರಿಗೆ ಕರೆಸಿ ಹೆಣ್ಣು ತೋರಿಸುವ ನೆಪದಲ್ಲಿ ಫೋಟೋ ವಿಡಿಯೋ ಮಾಡಿಸಿ ಬಳಿಕ ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ. ವಿವಾಹಿತರಾಗಿರುವ ಅಶ್ರಫ್ ವೀಡಿಯೋ ಬಹಿರಂಗವಾಗುತ್ತದೆ ಎಂಬ ಭಯದಿಂದ 44.80 ಲಕ್ಷ ಹಣವನ್ನು ಆರೋಪಿಗಳ ವಿವಿಧ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದ್ದಾರೆ. ಈ ಮಧ್ಯೆ ಅಶ್ರಫ್ ಅವರ ಪತ್ನಿಗೂ ಬೇರೆಯವರ ಅಶ್ಲೀಲ ವಿಡಿಯೋವೊಂದನ್ನು ಕಳುಹಿಸಿ ಹಣ ನೀಡದಿದ್ದರೆ ನಿಮ್ಮ ಪತಿಯ ಇಂತಹ ವಿಡಿಯೋ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಕಳೆದ ವಾರ ವಿಟ್ಲ ಪೊಲೀಸ್ ಠಾಣೆಗೆ ಆಗಮಿಸಿ ಅಶ್ರಫ್ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಒಂದು ವಾರ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಕೇಸ್ ದಾಖಲಿಸಲು ಪೊಲೀಸ್ ಠಾಣೆಯಲ್ಲಿ ಸಾಕಷ್ಟು ತೊಂದರೆಯಾಗಿತ್ತು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಕೇಸ್ ದಾಖಲಾಗಿದೆ. ಇದೀಗ ಸಂತ್ರಸ್ತ ಅಶ್ರಫ್ ಅವರಿಗೆ ನ್ಯಾಯ ದೊರೆಯಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಈ ಸುದ್ದಿ ಓದಿದ್ದೀರಾ? ಮೈಸೂರು | ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

ಆರೋಪಿ ಸಫಿಯಾ ಎಂಬುವವರು 2010ರಿಂದಲೂ ಹನಿಟ್ರ್ಯಾಪ್‌ನಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಇಂತಹ ಹಲವು ತಂಡಗಳು‌ ಮಂಗಳೂರು ಸೇರಿದಂತೆ ವಿವಿಧೆಡೆ ಸಕ್ರಿಯವಾಗಿದೆ. ಇವರು ಉದ್ಯಮಿಗಳನ್ನು ತಮ್ಮ ಬಲೆಗೆ ಹಾಕಿಕೊಂಡು ಹಣ ದೋಚುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಬೇಕು” ಎಂದು ಸೌದಾ ಒತ್ತಾಯಿಸಿದ್ದಾರೆ.‌

ಸಂತ್ರಸ್ತ ಮುಹಮ್ಮದ್ ಅಶ್ರಫ್, ಅಬ್ದುಲ್ ರಝಾಕ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...