ಮಂಗಳೂರು | ಪತ್ರಕರ್ತ ಹಂಝ ಮಲಾರ್‌ ಬರೆದ ಬ್ಯಾರಿ ಪುಸ್ತಕಗಳ ಬಿಡುಗಡೆ

Date:

Advertisements

ಮಲಾರ್ ಅರಸ್ತಾನದ ಮದ್‌ರ ಪ್ರಕಾಶನ ಪ್ರಕಟಿಸಿದ ಪತ್ರಕರ್ತ ಹಂಝ ಮಲಾರ್ ಬ್ಯಾರಿ ಭಾಷೆಯಲ್ಲಿ ಬರೆದ ಫೇಸ್‌ಬುಕ್ (ಕಥಾ ಸಂಕಲನ), ಬಿಂದಾಸ್ (ನಾಟಕ ಸಂಕಲನ), ಪಾಲುಂ-ಬಾಲೆ (ಅಂಕಣ ಬರಹಗಳ ಸಂಕಲನ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವು ಬುಧವಾರ ನಗರದ ಸಹೋದಯ ಸಭಾಂಗಣದಲ್ಲಿ ನಡೆಯಿತು.


‘ಫೇಸ್‌ಬುಕ್’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್. ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಅಭಿವೃದ್ಧಿ ಮತ್ತು ಅವುಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬ್ಯಾರಿ ಅಕಾಡಮಿಯ ಜೊತೆ ಬ್ಯಾರಿಗಳು ಕೈ ಜೋಡಿಸಬೇಕು ಎಂದು ಕರೆ ನೀಡಿದರು.

‘ಬಿಂದಾಸ್’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಮೇಲ್ತೆನೆಯ ಅಧ್ಯಕ್ಷ ಹಾಜಿ ವಿ. ಇಬ್ರಾಹಿಂ ನಡುಪದವು ಭಾಷಾ ಅಕಾಡಮಿಗಳು ಮಾಡುವ ಕೆಲಸಗಳನ್ನು ಹಂಝ ಮಲಾರ್ ವೈಯಕ್ತಿಕವಾಗಿ ಮಾಡುತ್ತಿದ್ದಾರೆ ಎಂದರು.

Advertisements
1000439597

‘ಪಾಲುಂ ಬಾಲೆ’ ಪುಸ್ತಕವನ್ನು ಬಿಡುಡೆಗೊಳಿಸಿ ಮಾತನಾಡಿದ ಬ್ಯಾರಿ ವಾರ್ತೆಯ ಉಪಸಂಪಾದಕ ಬಿ.ಎ. ಮುಹಮ್ಮದ್ ಅಲಿ ಕಮ್ಮರಡಿ ಭಾಷೆ ಮತ್ತು ಸಾಹಿತ್ಯದ ಮೂಲಕ ಭಾಷಾ ಅಕಾಡಮಿಗಳು ಶಾಲಾ-ಕಾಲೇಜುಗಳಲ್ಲಿ ಸೌಹಾರ್ದದ ವಾತಾವರಣ ನಿರ್ಮಿಸುವ ಅಗತ್ಯವಿದೆ. ಈ‌ ನಿಟ್ಟಿನಲ್ಲಿ ಸಾಹಿತ್ಯ ಅಕಾಡಮಿಯು ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಬ್ಯಾರಿ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಂಝ ಮಲಾರ್ ತಾನೂ ಬೆಳೆಯುವುದರೊಂದಿಗೆ ಇತರರಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.

1000439598

ಮದನಿ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಇಸ್ಮಾಯಿಲ್ ಮಾಸ್ಟರ್, ಹಿರಿಯ ಸಾಹಿತಿ ಅಬ್ದುಲ್ ರಹ್‌ಮಾನ್ ಕುತ್ತೆತ್ತೂರು ಅತಿಥಿ ಭಾಷಣ ಮಾಡಿದರು.

ಪತ್ರಕರ್ತ ಹಂಝ ಮಲಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೇಖಕ ಇಸ್ಮತ್ ಪಜೀರ್ ಕಾರ್ಯಕ್ರಮ ನಿರೂಪಿಸಿದರು. ಪತ್ರಕರ್ತ ಬಶೀರ್ ಕಲ್ಕಟ್ಟ ವಂದಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X