ಹಲವು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರು ನಗರ ಸೇರಿದಂತೆ ಹಲವೆಡೆ ಭೂಕುಸಿತವಾಗಿದ್ದು, ಇದೀಗ ಕಣ್ಣೂರಿನಲ್ಲಿ ಮನೆಯ ಮೇಲೆ ಗುಡ್ಡ ಕುಸಿದಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಮಂಗಳೂರು | ತಂದೆ ಸೇದಿ ಎಸೆದ ಬೀಡಿ ನುಂಗಿ ಮಗು ಸಾವು
ಕಣ್ಣೂರಿನ ಎಸ್ ಎಚ್ ನಗರ ದಯಾಬು ಎಂಬಲ್ಲಿ ಗುಡ್ಡ ಕುಸಿದು 4 ಮನೆಗಳಿಗೆ ಹಾನಿಯಾಗಿದ್ದು, ಮೈಮೂನಾ ಎಂಬವರ ಮನೆ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಇನ್ನೂ ನಾಲ್ಕು ಮನೆಗಳು ಅಪಾಯದಲ್ಲಿದ್ದು, ಭಾರೀ ಮಳೆ ಬಂದರೆ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾಯದಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.