ಮಂಗಳೂರು | ವಿಮಾನದಲ್ಲಿ ಗಾಂಜಾ ಸಾಗಿಸಿ ಸಿಕ್ಕಿಬಿದ್ದ ವ್ಯಕ್ತಿ!

Date:

ಮಂಗಳೂರಿನ ವಿಮಾನದಲ್ಲಿ ಹೈಡ್ರೋಫೋನಿಕ್ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದು, ಸಿಐಎಸ್ಎಫ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ಗುರುತಿಸಲಾಗಿದೆ.

- Advertisement -

ಈತ ಸೋಮವಾರ ಸಂಜೆ 6:30ಕ್ಕೆ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ‌ ವಿಮಾನದಲ್ಲಿ ಹೈಡ್ರೋಫೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ‌ ಬಂದ ಹಿನ್ನೆಲೆ ವಿಮಾನ‌ ನಿಲ್ದಾಣ ಸಿಬ್ಬಂದಿ ವಿಮಾನ‌ ನಿಲ್ದಾಣದ ಭದ್ರತಾ ಸಿಬ್ಬಂದಿ‌ ಸಿಐಎಸ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.‌ ಅದರಂತೆ ನಿನ್ನೆ ಸಂಜೆ ಇಂಡಿಗೋ ವಿಮಾನದಲ್ಲಿ ಬಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ‌ ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ‌‌ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನೂ ಓದಿ: ಮಂಗಳೂರು | ಕುಪ್ಪೆಪದವು, ಇರುವೈಲು ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆಗೆ ಒತ್ತಾಯ

ಈ ವೇಳೆ ಶಂಕರ್ ನಾರಾಯಣ್ ಪೊದ್ದಾರ್‌ನ ಚೆಕ್‌ – ಇನ್ ಬ್ಯಾಗೇಜ್‌ನಲ್ಲಿ ಸುಮಾರು 512 ಗ್ರಾಂ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿತ್ತು.‌ ತಕ್ಷಣ ಬೆಂಗಳೂರು ವಿಮಾನ ನಿಲ್ದಾಣದ‌ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ, ಸಿಐಎಸ್ಎಫ್ ಸಿಬ್ಬಂದಿ ಪತ್ತೆಯಾದ ಗಾಂಜಾ ಸಹಿತ ಆರೋಪಿಯನ್ನು ಹೆಚ್ವಿನ ವಿಚಾರಣೆಗಾಗಿ ಬಜ್ಪೆ‌ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...