ಮಂಗಳೂರು | ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಣಂಬೂರು ಬೀಚ್ ಬಳಿಯ ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋ ರಿಕ್ಷಾಕ್ಕೆ ಟ್ಯಾಂಕರ್‌ವೊಂದು ಅಪ್ಪಳಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

- Advertisement -

ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಈ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಮೃತಪಟ್ಟ ಮೂವರನ್ನು BM ಅಬೂಬಕ್ಕರ್ ಬಯಲು ಮೊಂಟೆಪದವು, ಇಬ್ರಾಹೀಂ ಬಟ್ಟಿಯಡ್ಕ, ಮನ್ಸೂರ್ ಮಜಲು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಪಣಂಬೂರು ಸಿಗ್ನಲ್ ಬಳಿಯಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕ‌ರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.

ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕ‌ರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕ‌ರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕ‌ರ್ ಗೆ ಢಿಕ್ಕಿ ಹೊಡೆದಿದೆ.

ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ ಎಂದು ವರದಿಯಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ ನೀಡಿ ಪರಿಶೀಲಿಸದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನ. 5ರಂದು ‘ವೋಟ್ ಬಚಾವ್ ದೇಶ ಬಚಾವ್’ ಪ್ರತಿಭಟನೆ 

ಎಐಸಿಸಿ ಕರೆ ಹಾಗೂ ಕೆಪಿಸಿಸಿ ನಿರ್ದೇಶನದ ಮೇರೆಗೆ ದಿನಾಂಕ 05 -11-26...

ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ...

ಮೈಸೂರು | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ

ಕಬ್ಬು ಬೆಳೆಗಾರರ ನ್ಯಾಯಯುತ ಹಕ್ಕೊತ್ತಾಯಗಳನ್ನು ಈಡೇರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...

ಉಡುಪಿ‌ | ಬೈಲೂರು ವಾರ್ಡಿನ ರಸ್ತೆಗೆ ಶೀಘ್ರ ಡಾಮರೀಕರಣಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ...