ಪೊಲೀಸ್ ಸಿಬ್ಬಂದಿಯಿಂದ ಅತ್ಯಾಚಾರ ಆರೋಪದ ಬಗ್ಗೆ ಮಹಿಳೆಯು ಮಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ಹಿನ್ನೆಲೆ ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂಬವರನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಮೂಡಬಿದ್ರೆ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕರಿಬ್ಬರು ಸೇರಿ ಮೂವರ ಬಂಧನ
ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ರವರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
