ಮಂಗಳೂರು | ರಸ್ತೆಯಲ್ಲಿ ನಮಾಝ್: ಸ್ವಯಂಪ್ರೇರಿತ ಪ್ರಕರಣ ರದ್ದುಗೊಳಿಸಿದ ಪೊಲೀಸರು; ಶರಣ್ ಪಂಪ್‌ವೆಲ್ ವಿರುದ್ಧ FIR

Date:

Advertisements

ಮಂಗಳೂರಿನ ಕಂಕನಾಡಿ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ಕಳೆದ ಶುಕ್ರವಾರ ನಮಾಝ್ ನಿರ್ವಹಿಸಿರುವ ವಿರುದ್ಧ ಪೊಲೀಸರು ದಾಖಲಿಸಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ವಾಪಸ್ ಪಡೆದಿದ್ದಾರೆ. ಜೊತೆಗೆ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, “ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇಲ್ಲದಿರುವುದರಿಂದ ಸದ್ರಿ ಪ್ರಕರಣದಲ್ಲಿ ‘ಬಿ’ ಅಂತಿಮ ವರದಿ ಸಲ್ಲಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ ಎ.ಸಿ.ಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಕಳೆದ ಶುಕ್ರವಾರ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ನಮಾಝ್ ನಿರ್ವಹಿಸಿರುವ ವಿಡಿಯೋ ವೈರಲ್ ಆಗಿತ್ತು. ನಮಾಝ್ ನಿರ್ವಹಿಸಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಪೊಲೀಸರು ಸುಮೋಟೊ ಪ್ರಕರಣ (ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್) ದಾಖಲಿಸಿಕೊಂಡಿದ್ದರು. ಪೊಲೀಸರ ಕ್ರಮಕ್ಕೆ ಮುಸ್ಲಿಮ್ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು.

Advertisements

ನಿನ್ನೆ ಕಾಂಗ್ರೆಸ್ ಮುಖಂಡ ಕೆ ಕೆ ಶಾಹುಲ್ ಹಮೀದ್ ನೇತೃತ್ವದ ಮುಸ್ಲಿಮ್ ನಾಯಕರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಕೇಸು ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು. ಕೇಸ್ ವಾಪಸ್ ಪಡೆಯದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದರು. ಎಸ್‌ಡಿಪಿಐ ಪಕ್ಷ ನಾಳೆ(ಮೇ 31) ಶುಕ್ರವಾರ ಪ್ರತಿಭಟನೆ ಕೂಡ ಹಮ್ಮಿಕೊಂಡಿತ್ತು.

ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್

ಅಲ್ಲದೇ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಭಂಗ ಉಂಟು ಮಾಡುವ ಹೇಳಿಕೆ ನೀಡಿದ್ದ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶರಣ್ ಪಂಪವೆಲ್ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

sharan pumpwell ಶರಣ್ ಪಂಪ್‌ವೆಲ್

“ಮಂಗಳೂರಿನ ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜಿನ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಝ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ” ಎಂಬ ಬರವಣಿಗೆಯೊಂದಿಗೆ ಪೋಸ್ಟ್ ಮಾಡಿದ್ದರು.

“ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಎಚ್ಚರಿಕೆಯನ್ನು ನೀಡಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟ್‌ ಅನ್ನು ಮಾಡಿದ್ದಾಗಿದೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾದ್ಯತೆ ಇರುವುದರಿಂದ ಪ್ರಕರಣವು ದಾಖಲಾಗಿರುತ್ತದೆ” ಎಂದು ಮಂಗಳೂರು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X