ಅಪರೂಪದ ಹಾಗೂ ಮಾರಣಾಂತಿಕ ರೋಗ ಹೊಂದಿದ್ದ ಗರ್ಭಿಣಿಯೊಬ್ಬರಿಗೆ ಯಶಸ್ವೀ ಶಸ್ತ್ರಚಿಕಿತ್ಸೆ ಮಾಡಿ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ದಾಖಲೆ ನಿರ್ಮಿಸಿದೆ.
ಹುಟ್ಟಿನಿಂದ ಹಿಮೋಫಿಲಿಯಾ ಎಂಬ ರಕ್ತಸಂಬಂಧೀ ಕಾಯಿಲೆಯಿಂದ ಬಳಲುತ್ತಿದ್ದ ಆಕೆ ಬಾಲ್ಯದಿಂದಲೇ ಇದಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗರ್ಭಾವಸ್ಥೆಯಲ್ಲಿ ಹಿಮೋಫಿಲಿಯಾ ಇದ್ದಲ್ಲಿ ಯಾವುದೇ ಸಮಯದಲ್ಲಿ ರಕ್ತಸ್ರಾವ ಆಗಿ ತಾಯಿ ಮರಣ ಆಗುವ ಸಾಧ್ಯತೆ ಇರುತ್ತದೆ. ಸಾಮಾನ್ಯವಾಗಿ ರಕ್ತಸ್ರಾವವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಫ್ಯಾಕ್ಟರ್ 8ರ ಕೊರತೆ ಈ ರೋಗದ ಮೂಲ ಅಂಶ. ಒಂದು ಲಕ್ಷಕ್ಕೆ ಒಂದರಂತೆ ಇರುವ ಅಪರೂಪದ ಈ ಕಾಯಿಲೆಗೆ ಚಿಕಿತ್ಸೆ ಅಷ್ಟು ಸುಲಭವಿರಲಿಲ್ಲ.
ವೆನ್ಲಾಕ್ ಬ್ಲಡ್ ಬ್ಯಾಂಕ್‌ನ ಡಾ. ಶರತ್ ಅವರನ್ನು ಭೇಟಿಯಾದ ಸಂಬಂಧಿಕರು, ಫ್ಯಾಕ್ಟರ್ 8 ಇಂಜೆಕ್ಷನ್‌ಗಳ ಪೂರೈಕೆಯ ಬಗ್ಗೆ ತಿಳಿದುಕೊಳ್ಳುತ್ತಾರೆ. ಅದೇ ಆಸ್ಪತ್ರೆಯಲ್ಲಿ ನಿಯಮಿತವಾಗಿ ಗರ್ಭಿಣಿ ಪರೀಕ್ಷೆ ನಡೆಸಲಾಗುತ್ತದೆ. ಸರ್ಕಾರದ ವತಿಯಿಂದ ಈ ಮಹಿಳೆಗೆ ವಾರಕ್ಕೆ ಒಂದಾವರ್ತಿ ಅಗತ್ಯತೆಯ ಈ ಇಂಜೆಕ್ಷನ್ ನೀಡುವ ವ್ಯವಸ್ಥೆಯನ್ನು ಗರ್ಭಾವಸ್ಥೆಯ ಪೂರ್ಣ ಅವಧಿಯವರೆಗೂ ಆಸ್ಪತ್ರೆ ನಿರ್ವಹಿಸುತ್ತದೆ. ನಿರೀಕ್ಷಿತ ಹೆರಿಗೆ ದಿನಾಂಕಕ್ಕೆ 20 ದಿನಗಳ ಮುಂಚಿತವಾಗಿ ಗರ್ಭಿಣಿಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಬಳಿಕ ಸುರಕ್ಷಿತವಾಗಿ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಲಾಗಿದೆ.
ಲಕ್ಷಾಂತರ ರೂಪಾಯಿ ಬೆಲೆಯುಳ್ಳ 25,000 ಯೂನಿಟ್‌ನ ಅಪರೂಪದ ಈ ಇಂಜೆಕ್ಷನ್ ನ್ನು ಸರ್ಕಾರದ ವತಿಯಿಂದ ನೀಡಲಾಗಿದೆ.
ಕೆಎಂಸಿಯ ತಜ್ಞ ವೈದ್ಯರುಗಳು ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಅನುಪಮಾ ರಾವ್, ಡಾ. ಸಿರಿಗಣೇಶ್, ಡಾ. ನಮಿತಾ, ಅರವಳಿಕೆ ತಜ್ಞರುಗಳಾದ ಡಾ. ಸುಮೇಶ್ ರಾವ್, ಡಾ. ರಂಜನ್ ಹಾಗೂ ಲೇಡಿಗೋಷನ್‌ನ ಶುಶ್ರೂಷಕ ವೃಂದದ ಸೇವೆ ನೆರವೇರಿಸಿದೆ.
ಇದನ್ನೂ ಓದಿ: ಮಂಗಳೂರು | ಮೇ 10ರಂದು ಪತ್ರಕರ್ತ ಬಿ.ಎಂ.ಬಶೀರ್ ಅವರ ‘ಅಗ್ನಿಪಥ’ ಕಾದಂಬರಿ ಬಿಡುಗಡೆ
ಪ್ರಸವೋತ್ತರವಾಗಿ ಸುಮಾರು ಹತ್ತು ದಿನಗಳ ಆಸ್ಪತ್ರೆ ಆರೈಕೆಯ ಬಳಿಕ ಸುರಕ್ಷಿತವಾಗಿ ಮನೆ ಸೇರಿರುವ ಮಹಿಳೆ ಲೇಡಿಗೋಷನ್ ಆಸ್ಪತ್ರೆ ಮತ್ತು ಉತ್ಕೃಷ್ಟ ಸರಕಾರಿ ವ್ಯವಸ್ಥೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.
Anandiuyiyfbn