ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗುರುವಾರ ಮತ್ತೆ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ.
ಮುಕ್ತಾರ್ ಮತ್ತು ಇತರ ಕೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜೈಲಿನಲ್ಲಿ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಕೈದಿ ಮುಕ್ತಾರ್ ಮತ್ತೊಬ್ಬ ಕೈದಿ ಕೇಶವ ಎಂಬಾತನಿಗೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಕೇಶವನನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
2023ರ ನ.6ರಂದು ನಡೆದಿದ್ದ ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿ ಕೇಶವನಿಗೆ ಉಳ್ಳಾಲ ಧರ್ಮನಗರದ ನಿವಾಸಿಯಾಗಿರುವ ಮುಕ್ತಾರ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮುಕ್ತಾರ್ ವಿರುದ್ಧ ಈಗಾಗಲೇ 15 ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಸಿಇಟಿ ಸೀಟ್ ಬ್ಲಾಕಿಂಗ್: ಅರ್ಹರಿಗೆ ಅವಕಾಶ ತಪ್ಪಲು ವ್ಯವಸ್ಥೆಯೇ ಶಾಮೀಲು?
ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿಗೆ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಮತ್ತು ಬರ್ಕೆ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.