ಮಂಗಳೂರು | ಪ್ರಚೋದಾನಕಾರಿ ಪೋಸ್ಟ್;‌ ಅಕೌಂಟ್ಸ್‌ ನಿಷ್ಕ್ರಿಯಗೊಳಿಸಿದ ಪೊಲೀಸರು

Date:

Advertisements

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಸಮಾಜದಲ್ಲಿ ದ್ವೇಷದ ಭಾವನೆಗಳನ್ನು ಹುಟ್ಟುಹಾಕುತ್ತಿದ್ದ 4 ಇನ್‌ಸ್ಟಾಗ್ರಾಮ್ ಪೇಜ್ ಮತ್ತು 1 ಫೇಸ್‌ಬುಕ್ ಪೇಜನ್ನು ಮಂಗಳೂರು ನಗರ ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.

ವಿವಿಧ ಧರ್ಮ ಮತ್ತು ವರ್ಗಗಳ ಜನರ ನಡುವೆ ದ್ವೇಷ ಹುಟ್ಟುಹಾಕಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುತ್ತಿದ್ದ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತಿದ್ದ ಅಕೌಂಟ್‌ಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.

vhp_bajrangadal_ashoknagar ಮತ್ತು shankha_nada ಎಂಬ 2 ಇನ್‌ಸ್ಟಾಗ್ರಾಮ್ ಪುಟಗಳ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. _dj_bharath_2008 ಎಂಬ ಇನ್‌ಸ್ಟಾಗ್ರಾಮ್ ಪುಟದ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. karaavali_official ಎಂಬ ಇನ್‌ಸ್ಟಾಗ್ರಾಮ್ ಪುಟದ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ʼಆಶಿಕ್ ಮೈಕಾಲʼ ಎಂಬ ಫೇಸ್‌ಬುಕ್ ಪೇಜ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎಲ್ಲಾ ಪ್ರಕರಣಗಳ ತನಿಖೆಯನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ: ಮಂಗಳೂರು | ಮಳೆ ಅವಾಂತರ; ಮೂರು ಲಕ್ಷ ಮೌಲ್ಯದ ದಿನಸಿ ನೀರುಪಾಲು

ಈ ಪುಟಗಳ ಮಾಹಿತಿ ಹಾಗೂ ಅವುಗಳನ್ನು ನಿಷ್ಕ್ರಿಯಗೊಳಿಸುವ ಬಗ್ಗೆ ಸಂಬಂಧಪಟ್ಟ ಕಾನೂನು ಜಾರಿ ಏಜೆನ್ಸಿಗಳಿಗೆ ಪತ್ರ ವ್ಯವಹಾರ ನಡೆಸಿದ ನಂತರ, ಆ ಏಜೆನ್ಸಿಗಳು ಈ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್ ಪುಟಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸದಂತೆ ರದ್ದುಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X