ಮಂಗಳೂರು | ತಾನು ಕೆಲಸ‌ ಮಾಡುತ್ತಿದ್ದ ಬ್ಯಾಂಕ್‌ನಲ್ಲೇ ನಿವೃತ್ತ ನೌಕರ ನೇಣಿಗೆ ಶರಣು

Date:

ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ನಗರದ ಪಿವಿಎಸ್ ವೃತ್ತದ ಬಳಿಯ ರಾಮಭವನ ಕಾಂಪ್ಲೆಕ್ಸ್ ನೆಲ ಮಹಡಿಯ ಕೆನರಾ ಬ್ಯಾಂಕ್ ಸ್ಟೋರ್ ರೂಮ್ ನಲ್ಲಿ ನಡೆದಿದೆ.

- Advertisement -

ಮೃತರನ್ನು ಅಳಕೆ ನಿವಾಸಿ ಗಿರಿಧರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೆನರಾ ಬ್ಯಾಂಕ್ ಕೊಡಿಯಾಲ್ ಬೈಲ್ ಶಾಖೆಯಲ್ಲಿ ಕಳೆದ 40 ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದು, ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಅವರು ಬ್ಯಾಂಕ್ ಮೇಲಿನ ಪ್ರೀತಿಯಿಂದ ಕಚೇರಿಗೆ ಬಂದು ಹೋಗುತ್ತಿದ್ದರು. ಬುಧವಾರ ಸಂಜೆ ರಾಮಭವನ ಕಾಂಪ್ಲೆಕ್ಸ್ ಬ್ಯಾಂಕ್ ಕಚೇರಿಗೆ ಬಂದಿದ್ದವರು ಮನೆಗೆ ಹಿಂದಿರುಗಿ ಹೋಗಲಿಲ್ಲ. ಈ ಹಿನ್ನೆಲೆ ಅವರ ಪತ್ನಿ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇಂದು ಬೆಳಗ್ಗೆ ಬ್ಯಾಂಕ್ ಬಾಗಿಲು ತೆರೆದಾಗ ಬ್ಯಾಂಕಿನ ಸ್ಟೋ‌ರ್ ರೂಂನಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಈ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: ಮಂಗಳೂರು | ನಿರ್ಭೀತ ವರದಿಗಾರಿಕೆ ಇಲ್ಲದ ಪತ್ರಿಕೋದ್ಯಮ ಅರ್ಥಹೀನ: ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಗಿರಿಧರ್ ಯಾದವ್ ಅವರು ರಾಜ್ಯ ಮಟ್ಟದ ಪವರ್ ಲಿಪ್ಪರ್ ಆಗಿದ್ದು, ಹಲವಾರು ಪದಕಗಳನ್ನು ಪಡೆದುಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...