ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಿಂದು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸಂಘಪರಿವಾರದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ವಾಹನ ಸಂಚಾರಕ್ಕೆ ಅವಕಾಶ ಕೊಡದೆ ವಾಹನ ಸವಾರರಿಗೆ ಅಡ್ಡಿಯುಂಟುಮಾಡಿದ್ದಾರೆ. ವಾಹನ ಸಂಚಾರಕ್ಕೆ ದಾರಿ ಬಿಡುವಂತೆ ಸೂಚಿಸಿದ ಪೊಲೀಸರ ವಿರುದ್ಧ ಗೂಂಡಾಗಿರಿ ನಡೆಸಿದ್ದಾರೆ.
ಬಾಂಗ್ಲಾ ಹಿಂದೂಗಳ ಮೇಲೆ ದೌರ್ಜನ್ಯ ಎಸೆಗಲಾಗುತ್ತದೆ ಎಂದು ಮಂಗಳೂರಿನಲ್ಲಿ ಸಂಘಪರಿವಾರ ಪ್ರತಿಭಟನೆ ಆಯೋಜಿಸಿತ್ತು. ಈ ವೇಳೆ ಕೆಲವರು ಖಾಸಗಿ ಸುದ್ದಿವಾಹಿನಿಗಳ ವಿಡಿಯೋ ಜರ್ನಲಿಸ್ಟ್ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಹಲ್ಲೆಗೆ ಯತ್ನ ನಡೆದ ಹಿನ್ನೆಲೆಯಲ್ಲಿ ಮಾಧ್ಯಮದವರು ಧರಣಿಯ ವರದಿಗಾರಿಕೆಯನ್ನು ಬಹಿಷ್ಕರಿಸಿ ವಾಪಸ್ಸಾದರು. pic.twitter.com/LpVa7rCVIu
— eedina.com ಈ ದಿನ.ಕಾಮ್ (@eedinanews) December 4, 2024
ಪೊಲೀಸರ ವಿರುದ್ಧ ಗೂಂಡಾಗಿರಿ ನಡೆಸುತ್ತಿದ್ದುದ್ದನ್ನು ಚಿತ್ರೀಕರಿಸುತ್ತಿದ್ದ ಮಾಧ್ಯಮದವರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ, ಪುಂಡಾಟ, ದಾಂಧಲೆ ನಡೆಸಿದ್ದಾರೆ. ಹಲ್ಲೆಗೆ ಯತ್ನಿಸಿದ್ದರಿಂದ ಪ್ರತಿಭಟನೆಯ ವರದಿಗಾರಿಕೆಯನ್ನು ಬಹಿಷ್ಕರಿಸಿದ್ದಾರೆ.