ವಿಶ್ವ ಹಿಂದೂ ಪರಿಷತ್ (ವಿಹಿಂಪ) ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್‌ಗೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.
ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಆರೋಪದ ಮೇಲೆ ಕದ್ರಿ ಪೊಲೀಸರು ಇವರನ್ನು ಬಂಧಿಸಿದ್ದರು.
ಬಂಧನದ ಬಳಿಕ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಪೊಲೀಸರು ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾಯಾಧೀಶರು, ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿ ಆದೇಶಿಸಿದರು.
ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯನ್ನು ಖಂಡಿಸಿ ಶರಣ್ ಪಂಪ್‌ವೆಲ್ ಅವರು ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಅವರನ್ನು ಬಂಧಿಸಿದ್ದರು. ಇದೀಗ ನ್ಯಾಯಾಲಯದಿಂದ ಜಾಮೀನು ದೊರೆತಿರುವುದರಿಂದ ಶರಣ್ ಪಂಪ್‌ವೆಲ್ ಬಿಡುಗಡೆಯಾಗಿದ್ದಾರೆ.