ಮಂಗಳೂರು | ಸಾಮಾಜಿಕ ಜವಾಬ್ದಾರಿ ಕವಿಗಳ ಆಶಯವಾಗಬೇಕು: ಬಹುಭಾಷಾ ಕವಿ ವಿಲ್ಸನ್ ಕಟೀಲ್

Date:

Advertisements

ಪ್ರಸ್ತುತ ಸಂದರ್ಭದಲ್ಲಿ ಕವಿಗಳಿಗೆ ಸಾಮಾಜಿಕ ಜಾಲತಾಣ ಸೇರಿದಂತೆ ಬರೆಯಲು ಅನೇಕ ಅವಕಾಶಗಳಿವೆ. ಆದರೆ ಬರಹಗಾರರು ಸಾಮಾಜಿಕ ಜವಬ್ದಾರಿಯ ಧ್ವನಿಯಾಗಿ ಶೋಷಣೆಯ ವಿರುದ್ಧ ಬರೆದಾಗಲೇ ಒಳ್ಳೆಯ ಕವಿತೆ ಸೃಷ್ಟಿಯಾಗಲು ಸಾಧ್ಯ ಎಂದು ಬಹುಭಾಷಾ ಕವಿ ವಿಲ್ಸನ್ ಕಟೀಲ್ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ತುಳು ಪರಿಷತ್ ಹಾಗೂ ಮಯೂರಿ ಫೌಂಡೇಶನ್ ಜಂಟಿಯಾಗಿ ಉರ್ವಾಸ್ಟೋರಿನ ತುಳುಭವನದಲ್ಲಿ ಹಮ್ಮಿಕೊಂಡ 5ನೇ ವರ್ಷದ ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಡೋಲು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

“ಪ್ರಸ್ತುತ ಸನ್ನಿವೇಶದಲ್ಲಿ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾಮರಸ್ಯವನ್ನು ಕಾಪಾಡಲು ತುಳುನಾಡಿನ ಪಾಡ್ದನಗಳಲ್ಲಿ ಉಲ್ಲೇಖ ಮಾಡಿರುವ ಸತ್ಯ, ನ್ಯಾಯ, ಧರ್ಮದ ಆಶಯಗಳು ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು, ಮಾಹಾತ್ಮ ಗಾಂಧಿ, ಬಸವಣ್ಣ ಅವರಂತಹ ದಾರ್ಶನಿಕರ ಆದರ್ಶಗಳನ್ನು ನಮ್ಮ ಪರಿಸರ ಹಾಗೂ ನಮ್ಮ ಊರಿನ ಭಾಷೆಗಳ ಮೂಲಕ ಅಭಿವ್ಯಕ್ತಪಡಿಸುವ ತುರ್ತು ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಮಲಾರ್ ಜಯರಾಮ್ ರೈ ಮಾತನಾಡಿ, “ತುಳು ಎಲ್ಲರೂ ಪ್ರೀತಿಸುವ ಭಾಷೆ ಹಾಗೂ ತುಳು ತುಳುನಾಡಿನ ಎಲ್ಲ ಭಾಷೆಗಳಿಗೂ ಪೋಷಕ ಸ್ಥಾನದಲ್ಲಿರುವ ಮತ್ತು ಕರಾವಳಿಯ ಎಲ್ಲ ಒಡನಾಡಿ ಭಾಷೆಗಳನ್ನು ಬೆಳೆಸುವ ಭಾಷೆಯಾಗಿದೆ” ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತುಳು ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, “ತುಳುನಾಡಿನ ಹದಿನಾಲ್ಕು ಭಾಷೆಗಳ ಕವಿಗಳನ್ನು ಒಟ್ಟು ಸೇರಿಸುವ ಮೂಲಕ ಭಾಷಾ ಸಾಮರಸ್ಯದ ಆಶಯವನ್ನು ಬಿಂಬಿಸುವ ಸಲುವಾಗಿ ಹಾಗೂ ಸಣ್ಣ ಸಮುದಾಯಗಳ ಒಳಗಿನ ಭಾಷೆಗಳಿಗೆ ಆದ್ಯತೆ, ಗೌರವ ನೀಡುವ ಸಲುವಾಗಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲ ಭಾಷೆಯವರನ್ನೂ ಒಂದುಗೂಡಿಸುವ ಹಿನ್ನೆಲೆಯಲ್ಲಿ ಅಕಾಡೆಮಿಯು ಬಹುಭಾಷಾ ಕವಿಗೋಷ್ಠಿ ಹಮ್ಮಿಕೊಂಡಿತತ್ತು” ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ ಶೆಟ್ಟಿ ಮುಂಬಯಿ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ, ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ ಹಾಗೂ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ ಸಿ ಭಂಡಾರಿ ಇದ್ದರು.‌

ಈ ಸುದ್ದಿ ಓದಿದ್ದೀರಾ? ಉಡುಪಿ | ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ವತಿಯಿಂದ ಓಣಂ ಸಂಭ್ರಮ

ಬಹುಭಾಷಾ ಕವಿಗಳಾದ ಚೆನ್ನಪ್ಪ ಅಳಿಕೆ(ತುಳು), ಮಂಜುಳಾ ಶೆಟ್ಟಿ(ತುಳು), ಸತೀಶ್ ಪಡುಬಿದ್ರಿ(ಕೊರಗ ಭಾಷೆ), ಸದಾನಂದ ನಾರಾವಿ(ಕನ್ನಡ), ಕವಿತಾ ಅಡೂರು(ಶಿವಳ್ಳಿ ತುಳು ), ರತ್ನಾ ಕೆ ಭಟ್ ತಲಂಜೇರಿ(ಹವ್ಯಕ ಕನ್ನಡ), ಕರುಣಾಕರ್ ಬಳ್ಕೂರು(ಕುಂದಗನ್ನಡ), ಶಮೀಮಾ ಕುತ್ತಾರ್(ಬ್ಯಾರಿ), ಉದಯ ಭಾಸ್ಕರ್(ಅರೆಭಾಷೆ), ಡಾ. ಮೀನಾಕ್ಷಿ ರಾಮಚಂದ್ರ(ಮಲೆಯಾಳಂ), ಬಾಲಕೃಷ್ಣ ಬೇರಿಕೆ(ಮರಾಠಿ), ರಾಧಿಕಾ ಪೈ(ಕೊಂಕಣಿ) ಚಂದ್ರಕಾಂತ್ ಗೋರೆ(ಚಿತ್ಪಾವನಿ), ಮೀರಾ ಭಟ್(ಕರಾಡ) ಕವಿತೆ ವಾಚಿಸಿದರು.

ತುಳು ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು, ಸದಸ್ಯೆ ಅಕ್ಷಯ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ಸದಸ್ಯ ಬಾಬು ಕೊರಗ ಪಾಂಗಾಳ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X