ಕಲುಷಿತ ನೀರು ಕುಡಿದು ವಿದ್ಯಾರ್ಥಿನಿಯರು ಅಸ್ವಸ್ಥ

Date:

16 ವೈದ್ಯಕೀಯ ವಿದ್ಯಾರ್ಥಿನಿಯರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ಘಟನೆ ಭಾನುವಾರ ಮಂಗಳೂರಿನಲ್ಲಿ ನಡೆದಿದೆ.

ಖಾಸಗಿ ನರ್ಸಿಗ್ ಕಾಲೇಜಿನ ವಿದ್ಯಾರ್ಥಿನಿಯರು ತಂಗಿದ್ದ ವಸತಿ ನಿಲಯದಲ್ಲಿ ಕಲುಷಿತ ನೀರಿನ ಸಮಸ್ಯೆ ಇತ್ತು. ಹೀಗಾಗಿ, ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು ಎರಡನೇ ಘಟನೆ ಎಂದು ಹೇಳಲಾಗಿದೆ.

ಕಲುಷಿತ ನೀರಿನಿಂದಾಗಿ ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿತ್ತು. ಅದಾದ ನಂತರ, ಹೊಟ್ಟೆ ನೋವಿನಿಂದ ಬಳಲುತ್ತಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. “16 ಮಂದಿ ವಿದ್ಯಾರ್ಥಿನಿಯರಿಗೆ ಸಮಸ್ಯೆ ಆಗಿತ್ತು. ಸ್ವಲ್ಪ ಮಟ್ಟಿಗೆ ವಾಂತಿ, ಭೇದಿ ಲಕ್ಷಣಗಳಿದ್ದವು. ಆತಂಕ ಪಡುವ ಅಗತ್ಯವಿಲ್ಲ. ಆಹಾರ ಸುರಕ್ಷತಾ ಅಧಿಕಾರಿಗಳು ವಸತಿನಿಲಯದಿಂದ ಆಹಾರದ ಮಾದರಿಗಳನ್ನು ಪರೀಕ್ಷೆಗೆ ಪಡೆದಿದ್ದಾರೆ. ಕಲುಷಿತ ನೀರಿನಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದು ಕಂಡುಬಂದರೆ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ಮೊಮ್ಮಗನಿಗೆ ದ್ವಿತೀಯ ಪಿಯುಸಿ ಪ್ರಮಾಣಪತ್ರ ವಿತರಿಸಿದ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು...