ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕಾಪು ಪಡುಗ್ರಾಮದ ಸೋಮನಾಥ್ ಎಲ್. ಸಾಲ್ಯಾನ್ (66) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ದ.ಕ. | 4 ಜಿಲ್ಲೆಯ 6 ಸಾವಿರ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ: ಸತೀಶ್ ಶೆಟ್ಟಿ ಪಟ್ಲ
ಶನಿವಾರ ಮುಂಜಾನೆ ಅವರು ರಾ.ಹೆ. 66ರ ಉಡುಪಿ-ಮಂಗಳೂರು ರಸ್ತೆಯ ಎಡಬದಿಯಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿರುವ ವೇಳೆ ಟೆಂಪೊ ಟ್ರಾವೆಲರ್ ಹಿಂದಿನಿಂದ ಬಂದ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆ ಬಿದ್ದು ತಲೆಯ ಹಿಂಬದಿಗೆ ಗಂಭೀರ ಗಾಯವಾಗಿ ಬಿದ್ದಿದರು.
ಈ ವೇಳೆ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಶಾಂತ್ ಅಮೀನ್ ರವರು ಅವರನ್ನು ಉಪಚರಿಸಿ ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರ ಗಾಯಗೊಂಡಿದ್ದರಿಂದ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
