ಮಂಗಳೂರು | ಲಂಚಕ್ಕೆ ಕೈಯ್ಯೊಡ್ಡಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಟ್ರಾಫಿಕ್ ಎಸ್‌ಐ ಶರೀಫ್, ಸಿಬ್ಬಂದಿ!

Date:

ಲಂಚದ ದಾಹಕ್ಕೆ ಬಿದ್ದು ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಎಸ್‌ಐ ಹಾಗೂ ಸಿಬ್ಬಂದಿ ಖುದ್ದಾಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.

- Advertisement -

ಠಾಣೆಯಿಂದ ಸ್ಕೂಟ‌ರ್ ಬಿಡುಗಡೆಗೊಳಿಸಲು ಲಂಚ ಪಡೆದ ಆರೋಪದ ಮೇಲೆ ನಗರದ ಉತ್ತರ(ಸುರತ್ಕಲ್) ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್‌ ಹಾಗೂ ಸಿಬ್ಬಂದಿ ಪ್ರವೀಣ್‌ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿರುವ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪೊಲೀಸರ ವಶದಲ್ಲಿದ್ದ ಸ್ಕೂಟ‌ರ್ ಬಿಡುಗಡೆಗೊಳಿಸಲು ನ್ಯಾಯಾಲಯವು ಆದೇಶ ಮಾಡಿತ್ತು. ಈ ಸಲುವಾಗಿ ದೂರುದಾರರು ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್ ಅವರನ್ನು ಭೇಟಿ ಮಾಡಿದ್ದರು. ಸ್ಕೂಟರ್ ಬಿಡುಗಡೆಗೊಳಿಸಲು ₹ 5 ಸಾವಿರ ಲಂಚ ನೀಡುವಂತೆ ಎಸ್‌ಐ ಶರೀಫ್‌ ಬೇಡಿಕೆ ಇಟ್ಟಿದ್ದರು. ಮೊತ್ತವನ್ನು ಕಡಿಮೆ ಮಾಡುವಂತೆ ಕೋರಿದಾಗ ಠಾಣಾ ಬರಹಗಾರರಾದ ನಾಗರತ್ನ ಅವರನ್ನು ಭೇಟಿ ಮಾಡಲು ತಿಳಿಸಿದ್ದರು. ಆಕೆಯ ಬಳಿ ಹೋದಾಗ, ಅವಾಚ್ಯವಾಗಿ ಬೈದು ₹ 3 ಸಾವಿರ ಲಂಚ ನೀಡುವಂತೆ ಹೇಳಿದ್ದರು ಎಂದು ವರದಿಯಾಗಿದೆ.

ಲಂಚ ನೀಡಲು ಮನಸ್ಸಿಲ್ಲದ ಕಾರಣ ದೂರುದಾರ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

1003229185
ಎಸ್ ಐ ಶರೀಫ್

‘ದೂರುದಾರ ವ್ಯಕ್ತಿಯಿಂದ ಸೋಮವಾರ ₹ 3 ಸಾವಿರವನ್ನು ಪಡೆದ ತಕ್ಷಣ ರೆಡ್ ಹ್ಯಾಂಡಾಗಿ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ’ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ದ.ಕ. ಜಿಲ್ಲೆಯ ಲೋಕಾಯುಕ್ತ ಪ್ರಭಾರ ಪೊಲೀಸ್‌ ವರಿಷ್ಠಾಧಿಕಾರಿ ನಂದಿನಿ ಬಿ.ಎನ್, ಡಿವೈಎಸ್‌ಪಿ ಗಾನ ಪಿ.ಕುಮಾರ್, ಇನ್‌ಸ್ಪೆಕ್ಟರ್ ಅಮಾನುಲ್ಲಾ.ಎ, ಚಂದ್ರಶೇಖರ್ ಕೆ.ಎನ್. ಮತ್ತು ಉಡುಪಿ ಠಾಣೆಯ ಇನ್‌ಸ್ಪೆಕ್ಟರ್ ಮಂಜುನಾಥ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯ ವೇಳೆ ಹಾಜರಿದ್ದರು ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...