ಮಂಗಳೂರು | ತುಳು ಭವನದ ರಿಯಾಯಿತಿ ರದ್ದು ಮಾಡಿಲ್ಲ: ಬಿಜೆಪಿ ಶಾಸಕ ಕಾಮತ್ ಹೇಳಿಕೆಗೆ ತುಳು ಅಕಾಡೆಮಿ ಅಧ್ಯಕ್ಷರ ಸ್ಪಷ್ಟನೆ

Date:

“ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ , ಸಂಸ್ಕ್ರತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ ತುಳು ಭವನದಲ್ಲಿ ವಿಶೇಷವಾಗಿ ಶೇಕಡಾ ಐವತ್ತರಷ್ಟು ರಿಯಾಯಿತಿಯಲ್ಲಿ ಸಭಾಂಗಣವನ್ನು ನೀಡಲಾಗುತ್ತಿದೆ. ಇದೇ ವೇಳೆ ಯಕ್ಷಗಾನ , ನಾಟಕ ಆಯೋಜಿಸುವವರಿಗೆ ಇನ್ನೂ ಹೆಚ್ಚಿನ ರಿಯಾಯಿತಿಯಲ್ಲಿ ಸಭಾಂಗಣವನ್ನು ಒದಗಿಸಲಾಗುತ್ತದೆ, ಯಾವುದೇ ರಿಯಾಯಿತಿಯನ್ನು ರದ್ದು ಮಾಡಿಲ್ಲ” ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಸ್ಪಷ್ಟೀಕರಣ ನೀಡಿದ್ದಾರೆ.

- Advertisement -

“ತುಳುವರಿಗಾಗಿಯೇ ಇರುವ ಮಂಗಳೂರಿನ ಏಕೈಕ ತುಳು ಅಕಾಡೆಮಿ ಭವನದಲ್ಲಿ ತುಳು ಭಾಷೆ, ಸಂಸ್ಕೃತಿಗೆ ಸಂಬಂಧಿಸಿದ ಸಭೆ-ಸಮಾರಂಭ-ಕಾರ್ಯಕ್ರಮಗಳಿಗೆ ಈವರೆಗೂ ಇದ್ದ ಸಂಪೂರ್ಣ ರಿಯಾಯಿತಿಯನ್ನು ತೆಗೆದು ಹಾಕಲಾಗಿದೆ. ಇತರೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವಂತೆ ಬಾಡಿಗೆ ವಸೂಲಿ ಮಾಡುವ ನಿರ್ಧಾರವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ” ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸುಳ್ಳು ಆರೋಪ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ , “ಸಂಘ ಸಂಸ್ಥೆಗಳು ಅಕಾಡೆಮಿಯೊಂದಿಗೆ ಸಹಭಾಗಿತ್ವದಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಉಚಿತವಾಗಿ ಸಭಾಂಗಣವನ್ನು ಒದಗಿಸಲಾಗುತ್ತದೆ. ಸಾಹಿತ್ಯ , ಸಾಂಸ್ಕ್ರತಿಕ ಹೊರತುಪಡಿಸಿದ ಖಾಸಗಿ ಕಾರ್ಯಕ್ರಮಗಳಿಗೆ ಮಾತ್ರ ಪೂರ್ತಿ ಬಾಡಿಗೆ ಪಡೆಯಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ತುಳುಲಿಪಿ ಕಲಿತವರಿಗೆ ಅಕಾಡೆಮಿ ವತಿಯಿಂದ ನೀಡಲಾಗುತ್ತಿದ್ದ ಸರ್ಟಿಫಿಕೇಟ್ ಸಹ ನಿಲ್ಲಿಸಲಾಗಿದೆ ಎಂಬ ಮತ್ತೊಂದು ಆರೋಪಕ್ಕೆ ಉತ್ತರಿಸಿರುವ ತುಳು ಅಕಾಡೆಮಿಯ ಅಧ್ಯಕ್ಷರು, “ಯಾವುದೇ ಸಂಘ , ಸಂಸ್ಥೆಗಳು ನಡೆಸುವ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸರ್ಟಿಫಿಕೇಟ್ ನೀಡುವುದು ಅಕಾಡೆಮಿ ಕಾರ್ಯವ್ಯಾಪ್ತಿಗೆ ಸಂಬಂಧಿಸಿದ ವಿಚಾರವಾಗಿರುವುದಿಲ್ಲ ಅಥವಾ ಅಕಾಡೆಮಿಯು ಪರೀಕ್ಷೆ ಪ್ರಾಧಿಕಾರವಾಗಿರುವುದಿಲ್ಲ. ಅಕಾಡೆಮಿಯ ವತಿಯಿಂದ ನೇರವಾಗಿ ಅಥವಾ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸುವ ತರಬೇತಿ ಶಿಬಿರ , ಕಮ್ಮಟ, ಸೆಮಿನಾರ್ ಗಳಲ್ಲಿ ಭಾಗವಹಿಸುವವರಿಗೆ ಸರ್ಟಿಫೀಕೇಟ್ ಆಯಾ ಸಂದರ್ಭದಲ್ಲಿ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಗಟ್ಟಿ 1
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್

ತುಳು ಮಾತೃ ಭಾಷಾ ಪ್ರಮಾಣ ಪತ್ರವನ್ನು (ತುಳು ಕೋಟ ಸರ್ಟಿಫೀಕೇಟ್) ಆಯಾ ವಿದ್ಯಾರ್ಥಿಗಳು ವಾಸಿಸುವ ತಾಲೂಕಿನ ತಹಶೀಲ್ದಾರರು ನೀಡುವವರಾಗಿದ್ದು, ಎಲ್ಲಾ ತಾಲೂಕುಗಳಲ್ಲಿ ಭಾಷಾ ಪ್ರಮಾಣ ಪತ್ರ ನೀಡಲಾಗುತ್ತಿದೆ. ಭಾಷಾ ಪ್ರಮಾಣ ಪತ್ರ ನೀಡುವ ಅಧಿಕಾರ ತಾಲೂಕು ದಂಡಾಧಿಕಾರಿಗಳ ವ್ಯಾಪ್ತಿಗೆ ಸೇರಿದ್ದಾಗಿರುತ್ತದೆ. ಕರ್ನಾಟಕದ ಯಾವುದೇ ಅಕಾಡೆಮಿಯು ವಿದ್ಯಾರ್ಥಿಗಳಿಗೆ ಭಾಷಾ ಪ್ರಮಾಣ ನೀಡುವ ಸಕ್ಷಮ ಪ್ರಾಧಿಕಾರವಾಗಿರುವುದಿಲ್ಲ. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಭಾಷಾ ಪ್ರಮಾಣ ಪತ್ರದ ಅರ್ಜಿ ನಮೂನೆಯನ್ನು ತುಳು ಅಕಾಡೆಮಿಯ ನೋಟಿಸ್ ಬೋರ್ಡಿನಲ್ಲಿ ಲಗತ್ತಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ‘ಮೆಟ್ರೋ ಚಿಕ್ಸ್’ ಹೆಸರಲ್ಲಿ ಮಹಿಳೆಯರ ರಹಸ್ಯ ವಿಡಿಯೋ: ಆರೋಪಿ ಯುವಕನ ಬಂಧನ

ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರವನ್ನು ಪಡೆಯುವ ರೀತಿಯಲ್ಲೇ ಮಾತೃ ಭಾಷಾ ಪ್ರಮಾಣ ಪತ್ರವನ್ನು ಪಡೆಯಲು ಅವಕಾಶ ಇರುವಂತಹದು. ಶಾಲಾ ದಾಖಲಾತಿ ವಿವರದೊಂದಿಗೆ ತಹಶೀಲ್ದಾರರ ಕಛೇರಿಗೆ ಅರ್ಜಿ ಸಲ್ಲಿಸಿದಾಗ ಭಾಷಾ ಪ್ರಮಾಣ ಪತ್ರವನ್ನು ತಹಶೀಲ್ದಾರರು ನೀಡುತ್ತಾರೆ. ತುರ್ತು ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ ದಿನದಂದೇ ಈ ಪ್ರಮಾಣ ಪತ್ರವನ್ನು ನೀಡುತ್ತಾರೆ. ತಹಶೀಲ್ದಾರರ ಹೊರತುಪಡಿಸಿ ಯಾರೇ ನೀಡುವ ಮಾತೃ ಭಾಷಾ ಸರ್ಟಿಫೀಕೇಟ್ ಗೆ ಕಾನೂನಿನ ಮಾನ್ಯತೆ ಇರುವುದಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೇಲಿನ ಎಲ್ಲ ವಿಚಾರಗಳ ಬಗ್ಗೆ ಮಂಗಳೂರು ದಕ್ಷಿಣದ ಶಾಸಕ ಶ್ರೀ ವೇದವ್ಯಾಸ ಕಾಮತ್ ಅವರು ಮಾಹಿತಿಯ ಕೊರತೆಯಿಂದ ವಾಸ್ತವ ಅಲ್ಲದ ಹೇಳಿಕೆಯನ್ನು ನೀಡಿರುವುದರಿಂದ ಈ ಸ್ಪಷ್ಟೀಕರಣವನ್ನು ನೀಡುವುದು ಅಗತ್ಯವಾಯಿತು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...