ಮಂಗಳೂರು | ತುಳು ಭಾಷೆಗೆ ಶೀಘ್ರ ಅಧಿಕೃತ ಸ್ಥಾನಮಾನ ಲಭಿಸಲಿ: ಚಂದ್ರಕಲಾ ನಂದಾವರ

Date:

Advertisements

ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಹೇಳಿದರು.

ಮಂಗಳೂರಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಸಹಯೋಗದೊಂದಿಗೆ ಉರ್ವ ತುಳು ಭವನದಲ್ಲಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ: ಬಲೆ ತುಳು ಓದುಗ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವ್ಯವಹಾರಿಕವಾಗಿ ಎಲ್ಲರೂ ತುಳು ಮಾತಾಡಬೇಕು. ಸರ್ಕಾರಿ ಕಚೇರಿಗಳಲ್ಲೂ ತುಳು ಬಳಸಬೇಕು. ಯಾವುದೇ ಭಾಷೆ ಮೇಲಲ್ಲ‌, ಯಾವುದೇ ಕೀಳಲ್ಲ ಎನ್ನುವ ಭಾವನೆ ರೂಪಿಸಿಕೊಳ್ಳಬೇಕು. ಹಾಗೇಯೆ ಭಾಷೆಗಳು ಇರುವುದು ಸಾಮರಸ್ಯಕ್ಕಾಗಿ, ದ್ವೇಷಕ್ಕಾಗಿ ಅಲ್ಲ” ಎಂದು ಹೇಳಿದರು.

Advertisements

“ತುಳು ಭಾಷೆಯಲ್ಲಿ ಅಗಾಧವಾದ ಪಾಂಡಿತ್ಯಪೂರ್ಣ ಸಾಹಿತ್ಯ ಕೃತಿಗಳಿವೆ. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಪರಿಚಯವಾಗಲಿ” ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಧಾರಾಕಾರ ಮಳೆ: ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, “ತುಳುವಿನಲ್ಲಿ ಹಾಗೂ ಅನ್ಯ ಭಾಷೆಗಳಲ್ಲಿ ತುಳುವಿನ ಬಗ್ಗೆ ಸಾವಿರಾರು ಪುಸ್ತಕಗಳಿವೆ. ಹೊಸ ತಲೆಮಾರಿನವರಿಗೆ ತುಳುನಾಡು ಹಾಗೂ ತುಳು ಸಾಹಿತ್ಯದ ಆಳ, ವಿಸ್ತಾರ ತಿಳಿಯಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ” ಎಂದರು.

ರೋಶನಿ ನಿಲಯದ ಕನ್ನಡ ವಿಭಾಗ ಮುಖ್ಯಸ್ಥ ಓಬನಾಥ್, ವಿದ್ಯಾರ್ಥಿ ಸಂಚಾಲಕಿ ಪೂಜಾ, ರಂಗಕರ್ಮಿ ಜಗನ್ ಪವಾರ್ ಬೇಕಲ್, ನಿವೃತ್ತ ಪ್ರಾಂಶುಪಾಲ ಡಾ. ಕೃಷ್ಣಮೂರ್ತಿ, ಪತ್ರಕರ್ತ ರಮೇಶ್ ಮಂಜೇಶ್ವರ, ಸಾಮಾಜಿಕ ಕಾರ್ಯಕರ್ತ ಬಾಬು ಪಿಲಾರ್ ಸೇರಿದಂತೆ ಇತರರು ಇದ್ದರು. ಅಕಾಡೆಮಿ ಸದಸ್ಯ ಸಂಚಾಲಕ ಪಾಂಗಳ ಬಾಬು ಕೊರಗ ಸ್ವಾಗತಿಸಿ, ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X