ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಯುವಕ ಹಾಗೂ ಮಹಿಳೆಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ನಗರದ ಕಂಕನಾಡಿ ವೆಲೆನ್ಸಿಯಾ ಸೂಟರಪೇಟೆಯ 6ನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಹರ್ಷಿತ್ ಶೆಟ್ಟಿ ಮತ್ತು ಸನ್ನಿಧಿ ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳು ತಪಾಸಣೆಗೆ ಒಳಪಡಿಸಿದ ಸಂದರ್ಭದಲ್ಲಿ ಮಾದಕ ವಸ್ತು ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
