ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಮಧ್ಯೆ ತಡರಾತ್ರಿ ಕಾರು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಕೇರಳ ಮೂಲದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ ಅದೇ ಕಾಲೇಜಿನಲ್ಲಿ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಮೊಹಮ್ಮದ್ ಅಮಲ್ (29) ಮೃತಪಟ್ಟವರು.
ನಗರದ ತಾರೆತೋಟ ಬಳಿ ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ಕಾರಿನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡ ವೈದ್ಯ ಮೊಹಮ್ಮದ್ ಅಮಲ್‌ರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಕೇರಳ ಮೂಲಕ ವೈದ್ಯ ವಿದ್ಯಾರ್ಥಿನಿಗೂ ಗಂಭೀರ ಗಾಯವಾಗಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ಮಂಗಳೂರು | ನೀಟ್ ಫಲಿತಾಂಶ: ಬರಕಾ ಸಂಸ್ಥೆಗೆ ಶೇ. 100 ಫಲಿತಾಂಶ
ಈ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ಲಾರಿಯೂ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಸಂಬಂಧ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.