ಮಂಗಳೂರು | ಕಾರು ಪಲ್ಟಿ; ಯುವ ವೈದ್ಯ ಸಾವು

Date:

ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ಮಧ್ಯೆ ತಡರಾತ್ರಿ ಕಾರು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.

- Advertisement -

ಕೇರಳ ಮೂಲದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮುಗಿಸಿ ಅದೇ ಕಾಲೇಜಿನಲ್ಲಿ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಮೊಹಮ್ಮದ್ ಅಮಲ್ (29) ಮೃತಪಟ್ಟವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ನಗರದ ತಾರೆತೋಟ ಬಳಿ ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ಕಾರಿನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡ ವೈದ್ಯ ಮೊಹಮ್ಮದ್ ಅಮಲ್‌ರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆಗಾಗಲೇ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಕೇರಳ ಮೂಲಕ ವೈದ್ಯ ವಿದ್ಯಾರ್ಥಿನಿಗೂ ಗಂಭೀರ ಗಾಯವಾಗಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಮಂಗಳೂರು | ನೀಟ್ ಫಲಿತಾಂಶ: ಬರಕಾ ಸಂಸ್ಥೆಗೆ ಶೇ. 100 ಫಲಿತಾಂಶ

ಈ ಸಂದರ್ಭದಲ್ಲಿ ಹಿಂದೆ ಬರುತ್ತಿದ್ದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ಲಾರಿಯೂ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಸಂಬಂಧ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...