ಮಂಗಳೂರು | ಬಸ್‌ನಲ್ಲಿ ಯುವತಿಗೆ ಗ್ರಾಮ ಪಂ. ಸದಸ್ಯನಿಂದ ಲೈಂಗಿಕ ಕಿರುಕುಳ; ಆರೋಪಿ ಮೇಲೆ ಹಲ್ಲೆ

Date:

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಾಮುಕ ಪುಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಗಳೂರು ಬಳಿ ನಡೆದಿದೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಥಳಿಸಿರುವ ಪ್ರಯಾಣಿಕರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಆರೋಪಿಯನ್ನು ನಾವೂರ ಗ್ರಾಮ ಪಂಚಾಯತಿ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ಹೆಸರಿಸಲಾಗಿದೆ. ಆತ ರಿಕ್ಷಾ ಚಾಲಕನಾಗಿದ್ದಾನೆ ಎಂದು ಹೇಳಲಾಗಿದೆ.

ಈ ವರದಿ ಓದಿದ್ದೀರಾ?: ಆಘಾತಕಾರಿ ಘಟನೆ | ಮಹಿಳೆ ಮೇಲೆ 18 ಕಾಮುಕರಿಂದ 18 ತಿಂಗಳು ನಿರಂತರ ಸಾಮೂಹಿಕ ಅತ್ಯಾಚಾರ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಯುವತಿಯ ಪಕ್ಕದ ಸೀಟಿನಲ್ಲಿ ಆರೋಪಿ ಕುಳಿತಿದ್ದ. ಆಗ, ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗಮನಿಸಿ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...