ಮಂಗಳೂರು: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಮಾಹಿತಿ ಉಪನ್ಯಾಸ

Date:

ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ ಆಶ್ರ ಬಿ., ಸಂಶೋಧನಾ ವಿದ್ಯಾರ್ಥಿನಿ, ವೃದ್ಧಾಪ್ಯದ ವೈದ್ಯಕೀಯ ವಿಭಾಗ, ಯೆನೆಪೋಯ ವೈದ್ಯಕೀಯ ಕಾಲೇಜು, ಮಂಗಳೂರು ಅವರು ವಿದ್ಯಾರ್ಥಿನಿಯರಿಗೆ ಋತುಸ್ರಾವದ ಅವಧಿಯಲ್ಲಿ ಮಹಿಳೆಯರ ಆರೋಗ್ಯದಲ್ಲಿ ಸಂಭವಿಸುವ ಏರುಪೇರುಗಳ ಕುರಿತು ವಿವರಿಸಿದರು. ಇದೇ ವೇಳೆ ಆರೋಗ್ಯಕರ ಜೀವನಶೈಲಿಗೆ ಅಗತ್ಯವಾದ ಆಹಾರ ಪದ್ಧತಿ ಹಾಗೂ ದಿನನಿತ್ಯ ಯೋಗ ಮತ್ತು ವ್ಯಾಯಾಮದ ಮಹತ್ವವನ್ನು ತಿಳಿಸಿದರು.

- Advertisement -

ನಂತರ ವಿದ್ಯಾರ್ಥಿನಿಯರ ಪ್ರಶ್ನೆಗಳು ಮತ್ತು ಸಮಸ್ಯೆಗಳ ಕುರಿತು ಮುಕ್ತ ಚರ್ಚೆ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ಹೇಮಲತ ಬಿ.ಡಿ, ಸಲಹಾ ಸಮಿತಿಯ ಕಾರ್ಯದರ್ಶಿ ಶ್ರೀಮತಿ ತಾರಾಕ್ಷಿ, ಪದವಿ ವಿಭಾಗದ ಸಂಯೋಜಕಿ ಶ್ರೀಮತಿ ಆಬಿದಾ ಬಿ., ಮೌಲ್ಯ ಶಿಕ್ಷಣ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಲೀಮಾ ಹಾಗೂ ಸಲಹಾ ಸಮಿತಿಯ ಸದಸ್ಯೆ ಶ್ರೀಮತಿ ನವ್ಯ ಉಪಸ್ಥಿತರಿದ್ದರು.

ಬೋಧಕ ಮತ್ತು ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ದ್ವಿತೀಯ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಆಯಿಶತ್ತುಲ್ ಸೆಮಿನ ಕಿರಾತ್ ಪಠಿಸಿ, ಮರಿಯಮ್ ಸದಾ ಶಿರೀನ್ ಸ್ವಾಗತಿಸಿ, ಆದಿಲ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...