ಮಂಗಳೂರಿಗೆ ಬರಲಿದೆ 100 ಇವಿ ಬಸ್‌ ?

Date:

ಕೇಂದ್ರ ಸರಕಾರದ ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ರಾಜ್ಯಕ್ಕೆ 750 ಇಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇವಿ ಬಸ್‌ಗಳ ಸಂಚಾರಕ್ಕೆ ವೇಗ ಸಿಕ್ಕಿದೆ. ಸರ್ಕಾರಿ ಬಸ್‌ಗಳ ಜೊತೆಗೆ ಖಾಸಗಿ ಬಸ್‌ ಮಾಲಕರು ಕೂಡ ಇಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸಲು ಸಿದ್ಧತೆ ಆರಂಭಿಸಿರುವುದು ವಿಶೇಷವಾಗಿದೆ.

- Advertisement -

ವಾಹನಗಳಿಂದ ಉಂಟಾಗುತ್ತಿರುವ ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರಕಾರ ಇಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿದೆ. ಅದರಂತೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ರಾಜ್ಯಕ್ಕೆ 750 ಇಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರುಗೊಳಿಸಿದ್ದು, ಆ ಪೈಕಿ ಸುಮಾರು 100 ಬಸ್‌ಗಳು ಮಂಗಳೂರಿಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಈ ಬಸ್‌ಗಳ ಸಂಚಾರಕ್ಕೆ ಅಗತ್ಯ ಮೂಲಸೌಕರ್ಯ ಸಿದ್ಧಪಡಿಸುವ ಕಾರ್ಯಗಳು ಆರಂಭಗೊಂಡಿವೆ. ಕುಂಟಿಕಾನ ಕೆಎಸ್ಸಾರ್ಟಿಸಿ ಡಿಪೋ ಹಾಗೂ ಬಿಜೈ ಬಸ್ ನಿಲ್ದಾಣದಲ್ಲಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲು ಮೆಸ್ಕಾಂ ಹಾಗೂ ಕೆಪಿಟಿಸಿಎಲ್ ಅನುಮೋದನೆ ನೀಡಿವೆ.

ಸಾರಿಗೆ ಕ್ಷೇತ್ರದಲ್ಲಿ ಇತಿಹಾಸ ಹೊಂದಿರುವ ಮಂಗಳೂರು, 1914ರಲ್ಲಿ ಶಂಕರ್ ವಿಠಲ್ ಸಂಸ್ಥೆ ಮಂಗಳೂರು–ಬಂಟ್ವಾಳ ಮಧ್ಯೆ ದೇಶದ ಮೊದಲ ಖಾಸಗಿ ಬಸ್ ಸಂಚಾರ ಆರಂಭಿಸಿದ ನಗರವೆಂಬ ಹೆಗ್ಗಳಿಕೆಯನ್ನು ಹೊಂದಿದೆ. ಇದೀಗ ಇಲೆಕ್ಟ್ರಿಕ್ ಬಸ್ ವ್ಯವಸ್ಥೆಯಲ್ಲೂ ಮುಂಚೂಣಿಯಲ್ಲಿರಲು ನಗರ ಸಜ್ಜಾಗುತ್ತಿದೆ.

ಮಂಗಳೂರಿನಲ್ಲಿ ಇವಿ ಬಸ್‌ಗಳ ಸಂಚಾರವನ್ನು ಪ್ರಾಯೋಗಿಕವಾಗಿ ಆರಂಭಿಸಲು ಯೋಜನೆ ರೂಪಿಸಲಾಗಿದೆ. ಪ್ರಯೋಗ ಹಂತದಲ್ಲಿ ಯಶಸ್ಸು ಕಂಡಲ್ಲಿ ಖಾಸಗಿ ಬಸ್‌ ಮಾಲಕರು ಇನ್ನಷ್ಟು ಇಲೆಕ್ಟ್ರಿಕ್ ಬಸ್‌ಗಳನ್ನು ಖರೀದಿಸಲು ಮುಂದಾಗುವ ಸಾಧ್ಯತೆ ಇದೆ.

ಖಾಸಗಿ ಇವಿ ಬಸ್‌ಗಳು 9 ಮೀಟರ್ ಉದ್ದವಿದ್ದು, 32 ರಿಂದ 41 ಆಸನಗಳ ಸಾಮರ್ಥ್ಯ ಹೊಂದಿರಲಿವೆ. ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 200 ಕಿಲೋಮೀಟರ್ ಸಂಚರಿಸಬಹುದಾಗಿದ್ದು, ಎರಡು ಗಂಟೆಗಳಲ್ಲಿ ರಿಚಾರ್ಜ್ ಆಗಲಿವೆ. ಹವಾನಿಯಂತ್ರಿತ ಸೌಲಭ್ಯವಿರುವ ಈ ಬಸ್‌ಗಳಿಗೆ ಐದು ವರ್ಷದ ಬ್ಯಾಟರಿ ಗ್ಯಾರಂಟಿಯೂ ಇರಲಿದೆ. ಬಸ್‌ಗಳ ಬಾಡಿ ವಿನ್ಯಾಸ ಕಾರ್ಯವನ್ನು ಪುಣೆಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...