ಮಂಗಳೂರು | ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಇಲಾಖಾ ಸಿಬ್ಬಂದಿ !

Date:

ಸರ್ಕಾರಿ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ.

- Advertisement -

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯಲ್ಲಿ ಎಸ್‌ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಪತ್ ಅವರು ಸರ್ಕಾರಿ ಕಾಮಗಾರಿಯ ಬಿಲ್‌ಗೆ 4 ಶೇಕಡಾ ಪ್ರಮಾಣದಲ್ಲಿ ರೂ.22,600 ಲಂಚ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇಂದು (ಮಾರ್ಚ್ 2) ಲಂಚದ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಲೆಗೆ ಬೀಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

ಈ ಕಾರ್ಯಾಚರಣೆ ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಸುರೇಶ್ ಕುಮಾರ್ ಪಿ., ಡಾ. ಗಾನ ಪಿ. ಕುಮಾರ್, ಪಿಐ ಭಾರತಿ ಜಿ. ಅವರ ನೇತೃತ್ವದಲ್ಲಿ, ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕೆ.ಎನ್. ಹಾಗೂ ಸಿಬ್ಬಂದಿ ತಂಡದ ಸಹಕಾರದಿಂದ ನಡೆಯಿತು ಎಂದು ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...