ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ನಿವಾಸಿಯಾಗಿರುವ ಚಂದ್ರಿಕ ಮಡ್ಡೆಪ್ಪ ಮಾದರ ( 32) ಕಳೆದ ಏಪ್ರಿಲ್ 17ರಂದು ಮಧ್ಯಾಹ್ನ 12 ಗಂಟೆಗೆ ಕೆಲಸಕ್ಕೆಂದು ತೆರಳಿದ್ದರು. ಮನೆಯಿಂದ ಹೋದವರು ವಾಪಸ್ಸು ಬಂದಿರುವುದಿಲ್ಲ ಎಂದು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಈ ಘಟನೆಯ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಮಹಿಳೆ ಬಗ್ಗೆ ಸುಳಿವು ಸಿಕ್ಕಲ್ಲಿ ಮಣಿಪಾಲ ಪೊಲೀಸ್ ಠಾಣೆಗೆ ಸಂಪರ್ಕಿಸಬೇಕಾಗಿ ಉಡುಪಿ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮಂಗಳೂರು | ಲಂಚ ಸ್ವೀಕಾರ ಆರೋಪ; ಟ್ರಾಫಿಕ್ ಎಸ್‌ಐ ಶರೀಫ್, ಸಿಬ್ಬಂದಿಗೆ ಜಾಮೀನು
ಮಾಹಿತಿ ಸಿಕ್ಕಲ್ಲಿ ದೂರವಾಣಿ ಸಂಖ್ಯೆ 0820-2570328, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ದೂರವಾಣಿ 0820-2521257, ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆ 0820-2526444 ಯನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
