ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

Date:

ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ ಹಂತದಲ್ಲಿ ತಳಮಟ್ಟದ ಕಾರ್ಯಕರ್ತರು ಮಕ್ಕಳ ಜೊತೆ ವ್ಯವಹರಿಸಿದರೆ, ಎರಡನೇ ಹಂತದಲ್ಲಿ ಪೊಲೀಸರು ಮಕ್ಕಳ ಜೊತೆ ವ್ಯವಹರಿಸಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಪೊಲೀಸರಿಗೆ ಬಾಲ ನ್ಯಾಯ ಕಾಯ್ದೆಯ ಸ್ಪಷ್ಟ ಅರಿವು ಇರಬೇಕಾಗುತ್ತದೆ. ಮಕ್ಕಳ ಜೊತೆ ಸಂವೇದನೆಯಿಂದ ವ್ಯವಹರಿಸಬೇಕಾಗುವುದರಿಂದ ಇಂತಹ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಂಡು ಪೊಲೀಸರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದರು.

- Advertisement -

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಪಾಯದಲ್ಲಿ ಸಿಲುಕಿದ ಮಕ್ಕಳನ್ನು ರಕ್ಷಣೆ ಮಾಡುವಾಗ ಅಥವಾ ಅಪರಾಧಿ ಚಟುವಟಿಕೆಗಳಲ್ಲಿ ನಿರತರಾದ ಮಕ್ಕಳನ್ನು ಕಾನೂನಿನ ಸುಪರ್ದಿಗೆ ತೆಗೆದುಕೊಳ್ಳುವ ಸಮಯದಲ್ಲಿ ಬಾಲ ನ್ಯಾಯ ಕಾಯ್ದೆಯ ನಿಯಮಗಳನ್ನು ಪಾಲಿಸಿ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕಾಗುತ್ತದೆ. ಸಮವಸ್ತ್ರದಲ್ಲಿರುವ ಪೊಲೀಸರನ್ನು ಕಂಡು ಮಕ್ಕಳು ಬೆದರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಮಕ್ಕಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ದೊಡ್ಡವರ ಪ್ರಕರಣಗಳಂತೆ ನೋಡಲಾಗುವುದಿಲ್ಲ. ಮಕ್ಕಳ ಹಕ್ಕುಗಳ ರಕ್ಷಣೆಯ ಪ್ರಕ್ರಿಯೆಗಳನ್ನು ನಿಭಾಯಿಸಲು ತರಬೇತಿ ಹೊಂದಿದ ಸಿಬ್ಬಂದಿಗಳನ್ನು ತಯಾರಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಸಹಕಾರಿಯಾಗಿವೆ. ಕಾರ್ಯಾಗಾರದಲ್ಲಿ ಪಡೆದ ಜ್ಞಾನವನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ಹೇಳಿದರು.

ಬಾಲ ನ್ಯಾಯ ಮಂಡಳಿಯ ಅಧ್ಯಕ್ಷ, ಎಸಿಜೆಎಮ್ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂತೋಷ್ ಶ್ರೀವತ್ಸವ್ ಮಾತನಾಡಿ ನ್ಯಾಯಾಲಯ ಮತ್ತು ಪೊಲೀಸ್ ಇಲಾಖೆ ಕಾನೂನಿನ ರಕ್ಷಕರು. ಇಲಾಖೆಯಲ್ಲಿ ಮಕ್ಕಳ ಜೊತೆ ನೇರವಾಗಿ ವ್ಯವಹರಿಸುವ ಸಿಬ್ಬಂದಿಗಳಿಗೆ ಬಾಲ ನ್ಯಾಯ ಕಾನೂನಿನ ಮಾಹಿತಿ ಇರುವುದು ಅಗತ್ಯ. ಮಕ್ಕಳಿಗೆ ಸಂಬAಧಿಸಿದ ದೂರುಗಳು ಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೆ ತ್ವರಿತವಾಗಿ ಸ್ಪಂದಿಸಿದಾಗ ಹಲವಾರು ಮುಗ್ದ ಜೀವಗಳನ್ನು ಸಮಯೋಚಿತವಾಗಿ ರಕ್ಷಿಸಬಹುದು ಎಂದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಮಾತನಾಡಿ ಮಕ್ಕಳ ಹಕ್ಕುಗಳ ರಕ್ಷಣೆ ಸಂದರ್ಭದಲ್ಲಿ ಮಾಹಿತಿ ಕೊರತೆಯಿಂದ ಸಣ್ಣಪುಟ್ಟ ತಪ್ಪುಗಳಾಗುತ್ತವೆ. ಕಾರ್ಯಾಗಾರಗಳಿಂದ ಕಾನೂನಿನ ಬಗ್ಗೆ ತಿಳುವಳಿಕೆ ಹೆಚ್ಚಾಗುತ್ತದೆ ಹಾಗೂ ಮುಂದಿನ ದಿನಗಳಲ್ಲಿ ಸಮರ್ಪಕ ಸೇವೆ ನೀಡಲು ಅನುಕೂಲವಾಗುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿದ್ದ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ ರಾಘವೇಂದ್ರ ಭಟ್ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜೂಹಿ ದಾಮೋದರ್ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಮಹೇಶ್ ದೇವಾಡಿಗ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...