ಮಂಡ್ಯ| ಆ.20ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮ್ಯಾರಥಾನ್

Date:

ಕರ್ನಾಟಕ ಜನಶಕ್ತಿ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಶ್ರಮಿಕ ಶಕ್ತಿ ವಿದ್ಯಾರ್ಥಿ ಸಂಘಟನೆಗಳ ಆಶ್ರಯದಲ್ಲಿ ಆಗಸ್ಟ್ 20 ರಂದು ಮಂಡ್ಯದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಜಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ ತಿಳಿಸಿದರು.

- Advertisement -

ಮಂಡ್ಯ ಪತ್ರಕರ್ತರ ಸಂಘದಲ್ಲಿ ಮ್ಯಾರಾಥಾನ್ ಹೋರಾಟದ ಪೋಸ್ಟ‌ರ್ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 20 ರಂದು ದೇವರಾಜು ಅರಸು ಅವರ ಜನ್ಮದಿನದ ಅಂಗವಾಗಿ ಎಲ್ಲರಿಗೂ ಹಕ್ಕು ಸಿಗಲಿ ಎನ್ನುವ ನಿಟ್ಟಿನಲ್ಲಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. ನಿವೇಶನ ರಹಿತರು ಭಾಗವಹಿಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಭದ್ರತೆ ಸಿಗಬೇಕು. ಶ್ರಮಿಕ ನಗರಗಳಲ್ಲಿ ಅತ್ಯಾಚಾರ, ಹಲ್ಲೆಗಳು ನಡೆಯದ ರೀತಿಯಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಸ್ಲಂಗಳ ಯುವಕರು ಮಾದಕ ವ್ಯಸನಿಗಳಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿಯೂ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಎಂ ಸಿದ್ದರಾಜು ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ 60 ಸ್ಲಂಗಳು ಇದ್ದು ಸಾವಿರಾರು ಕುಟುಂಬಗಳು ವಾಸವಿದೆ. ಹಾಗೆಯೇ ರಾಜ್ಯದಲ್ಲಿ 6,500 ಕೊಳಚೆ ಪ್ರದೇಶಗಳು ಇದ್ದು ಅಲ್ಲಿಯೂ ಕೂಡ ಲಕ್ಷಾಂತರ ಕುಟುಂಬಗಳು ವಾಸವಿದೆ. ಆದರೆ ಅವರಿಗೆ ಹಕ್ಕುಪತ್ರ, ವಸತಿ ಮತ್ತು ನಿವೇಶನವನ್ನು ನೀಡಿಲ್ಲ. ಹಾಗಾಗಿ ಈ ಬಗ್ಗೆ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಮದ್ದೂರು ಪಟ್ಟಣವನ್ನು ಸೇರಿದಂತೆ ಮಂಡ್ಯದ ಇತರೆಡೆ 60 ಶ್ರಮಿಕ ನಗರಗಳಲ್ಲಿ ನಿವೇಶನ, ವಸತಿ ಹಕ್ಕು ಕಲ್ಪಿಸಿಲ್ಲ. ಆದ ಕಾರಣ ನಿವೇಶನ ಮತ್ತು ವಸತಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮ್ಯಾರಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮದ್ದೂರು ತಾಲ್ಲೂಕು ಗುಡಿಗೆರೆ ಗ್ರಾಮದ ಯುವಕರು ಮ್ಯಾರಥಾನ್‌ನಲ್ಲಿ ಭಾಗವಹಿಸುವ ಮೂಲಕ ಮಂಡ್ಯದ ಶ್ರಮಿಕರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ರಸ್ತೆಗಳ ಅಭಿವೃದ್ಧಿಗಾಗಿ 15 ಕೋಟಿ ಅನುದಾನ ಬಿಡುಗಡೆ : ಕೊತ್ತೂರು ಮಂಜುನಾಥ್

ಗೋಷ್ಠಿಯಲ್ಲಿ ಮಹಿಳಾ ಮುನ್ನಡೆ ಕಾರ್ಯದರ್ಶಿ ಶಿಲ್ಪ, ಜಿಲ್ಲಾ ಸಮಿಕ ನಗರ ನಿವಾಸಿಗಳ ಒಕ್ಕೂಟದ ಅಧ್ಯಕ್ಷ ಪ್ರಕಾಶ್‌, ವಿದ್ಯಾರ್ಥಿ ಸಂಘಟನೆಯ ಅಂಜಲಿ, ಮುಖಂಡರಾದ ನಿಂಗಮ್ಮ, ಲತಾ, ಗಾಯಿತ್ರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...