‘ಸ್ವಚ್ಛ ಮೈಸೂರು’ ಜಾಗೃತಿಗಾಗಿ ಬೃಹತ್ ಸೈಕಲ್ ಜಾಥಾ

Date:

ಸ್ವಚ್ಛ ಮೈಸೂರು ಜಾಗೃತಿಗಾಗಿ ನಡೆದ ಬೃಹತ್ ಸೈಕಲ್ ಜಾಥಾ ಯಶಸ್ವಿಯಾಗಿ ನಡೆಯಿತು. ‘ನಾಳಿನ ಉತ್ತಮ ಪರಿಸರಕ್ಕಾಗಿ, ಇಂದೇ ಏರೋಣ ಸೈಕಲ್ ಸವಾರಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಅಭಿಯಾನದಲ್ಲಿ 350ಕ್ಕೂ ಹೆಚ್ಚು ನಾಗರಿಕರು ಹಾಗೂ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.

- Advertisement -

ಶನಿವಾರ ಬೆಳಗ್ಗೆ 6-30ಕ್ಕೆ ಮೈಸೂರಿನ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಲಾಯಿತು. ಅಲ್ಲಿಂದ ಆರಂಭವಾದ ಜಾಥಾವು ಕೆ.ಆರ್ ವೃತ್ತ, ದೇವರಾಜು ಅರಸ್ ರಸ್ತೆ, ಬಾಬು ಜಗಜೀವನ್ ರಾಮ್ ವೃತ್ತ, ಆಯುರ್ವೇದಿಕ್ ವೃತ್ತ, ಹೈವೇ ಸರ್ಕಲ್, ಎಲ್.ಐ.ಸಿ ವೃತ್ತ ಮತ್ತು ಜೆ.ಎಸ್.ಎಸ್ ಮೆಡಿಕಲ್ ಕಾಲೇಜು ಮಾರ್ಗವಾಗಿ ಸಾಗಿ, ಸಯ್ಯಾಜಿ ರಾವ್ ರಸ್ತೆ ಮೂಲಕ ಅಂತಿಮವಾಗಿ ಪುನಃ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಮಾರೋಪಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಆಸೀಫ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಪಾಲಿಕೆಯ ಉಪ ಆಯುಕ್ತರಾದ ಮಂಜು ಸಿ.ಎಸ್ (ಅಭಿವೃದ್ಧಿ), ಸೋಮಶೇಖರ್ ಕೆ.ಜಿ.ಎಸ್. (ಕಂದಾಯ), ಕಾರ್ಯಪಾಲಕ ಎಂಜಿನಿಯರ್ ದೀಪಕ್, ಹಾಗೂ ಪಾಲಿಕೆಯ ಆರೋಗ್ಯಾಧಿಕಾರಿಗಳಾದ ಮೃತ್ಯುಂಜಯ ಕೆ.ಎಸ್ ಭಾಗವಹಿಸಿದ್ದರು.

ಸೈಕಲ್ ಜಾಥಾದಲ್ಲಿ ರಾಯಲ್ ರೈಡರ್ಸ್ ಮೈಸೂರು, ಸೈಕ್ಲೋಪೀಡಿಯಾ, ಮೈಸೂರು ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್, ಮೈಸೂರು ಅಥ್ಲೆಟ್ಸ್ ಕ್ಲಬ್, ಮೈಸೂರು ಸೈಕ್ಲಿಂಗ್ ತಂಡದ ಸದಸ್ಯರು, ಪ್ಯಾರಾಮೌಂಟ್, ಮೈ ಬೈಕ್, ಅರ್ನಾಲ್ಡ್ ಫಿಟ್ನೆಸ್ ಮತ್ತು ಕಾಂಗರೂ ಕೇರ್ ಸಂಸ್ಥೆಗಳ ಪ್ರತಿನಿಧಿಗಳು ಬೃಹತ್ ಜಾಥಾಕ್ಕೆ ಸಾಥ್ ನೀಡಿದರು. ನಗರದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಈ ಸೈಕಲ್ ಜಾಥಾವು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವಲ್ಲಿ ಯಶಸ್ವಿಯಾಯಿತು.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಐ ತಂತ್ರಜ್ಞಾನ ಆಧಾರಿತ ‘ವೈಟಲ್ ವೀವ್ಸ್’ ಬಿಡುಗಡೆ

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸೀಫ್, ಪಾಲಿಕೆಯ ಉಪ ಆಯುಕ್ತ ಮಂಜು ಸಿ.ಎಸ್ (ಅಭಿವೃದ್ಧಿ), ಸೋಮಶೇಖರ್ ಕೆ.ಜಿ.ಎಸ್ (ಕಂದಾಯ), ಕಾರ್ಯಪಾಲಕ ಎಂಜಿನಿಯರ್ ದೀಪಕ್, ಪಾಲಿಕೆ ಆರೋಗ್ಯಾಧಿಕಾರಿ ಮೃತ್ಯುಂಜಯ ಕೆ.ಎಸ್, ವಲಯ ಆಯುಕ್ತ ಪ್ರತಿಭಾ, ರಮೇಶ್, ಮಂಜುನಾಥ್ ರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚೇತನ, ಮಧುಕರ್ ಸೇರಿದಂತೆ ಪಾಲಿಕೆಯ ಪರಿಸರ ಎಂಜಿನಿಯರ್ಗಳು ಹಾಗೂ ಆರೋಗ್ಯ ನಿರೀಕ್ಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...