ಬೀದರ್‌ | ಆಗಸ್ಟ್ 21ರಂದು ಬೃಹತ್ ಉದ್ಯೋಗ ಮೇಳ: ಸಚಿವ ಈಶ್ವರ ಖಂಡ್ರೆ

Date:

  • ಅಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ
  • ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಉದ್ಯೋಗ ಆಕಾಂಕ್ಷಿಗಳು ಸದಪಯೋಗ ಪಡೆದುಕೊಳ್ಳುವಂತೆ ಸಲಹೆ

ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಭೀಮಣ್ಣಾ ಖಂಡ್ರೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಯುಕ್ತಾಶ್ರದಲ್ಲಿ ಅಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಬೀದರ್ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ‌ದರು. “ಜಿಲ್ಲೆಯಲ್ಲಿ ಅನೇಕ ಯುವಕರು ನಿರೂದ್ಯೋಗಿಗಳಾಗಿ ಅಲೆದಾಡುವುದನ್ನು ಈ ಉದ್ಯೋಗ ಮೇಳದಿಂದ ತಪ್ಪಿಸಬಹುದು ಮತ್ತು ಹೆಚ್ಚಿನ ವಿದ್ಯಾರ್ಥಿಗಳಿಗೆ ಈ ಮೇಳದಿಂದ ಉದ್ಯೋಗ ಅವಕಾಶಗಳು ದೊರೆಯಲಿವೆ” ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಐಟಿಐ, ಡಿಪ್ಲೋಮಾ ಪದವಿಗಳನ್ನು ಪಡೆದವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು. ಆಸಕ್ತ ಅಭ್ಯರ್ಥಿಗಳು ಮುಂಚಿತವಾಗಿ ಗ್ರಾಮೀಣ ಅಭ್ಯರ್ಥಿಗಳಾಗಿದ್ದರೆ ತಮ್ಮ ಹತ್ತಿರದ ಗ್ರಾಮ ಪಂಚಾಯತಿ ಮತ್ತು ನಗರ ಪ್ರದೇಶದ ಅಭ್ಯರ್ಥಿಗಳಾಗಿದ್ದರೆ ನಗರಸಭೆಯಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬೇಕು. ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು. ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಸೇರಿದಂತೆ ಐದು ಸಾವಿರ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸುವಂತೆ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಬರುವ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆಗಳನ್ನು ಮಾಡಲಾಗುವುದು. ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ-ಕಾಲೇಜುಗಳಲ್ಲಿ ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದು ತಿಳಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಉದ್ಯೋಗ ಮೇಳದ ಸದಪಯೋಗವನ್ನು ಜಿಲ್ಲೆಯ ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಪಡೆದುಕೊಳ್ಳಬೇಕು.
ಅಗಸ್ಟ್ 21 ರಂದು ನಡೆಯುವ ಉದ್ಯೋಗ ಮೇಳವು ವ್ಯವಸ್ಥಿತವಾಗಿ ನಡೆಯಲು ನೂಡಲ್ ಅಧಿಕಾರಿಗಳನ್ನು ನೇಮಿಸಬೇಕು ಮತ್ತು ಇದರಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ವಿವಿಧ ಕಂಪನಿಗಳ ಮಾಹಿತಿಯನ್ನು ಸ್ಪಸ್ಟವಾಗಿ ಅಭ್ಯರ್ಥಿಗಳಿಗೆ ತಿಳಿಯುವಂತೆ ಬ್ಯಾನರ್‌ಗಳನ್ನು ಬರೆಸಿ ಅಳವಡಿಸಬೇಕು ಹಾಗೂ ಜಿಲ್ಲೆಯಾದ್ಯಂತ ಮೇಳದ ಮಾಹಿತಿ ಕುರಿತ ಕರಪತ್ರಗಳನ್ನು ಮುದ್ರಸಿ ಹೆಚ್ಚಿನ ಪ್ರಚಾರ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಒಳಜಗಳ | ಪ್ರಭು ಚೌಹಾಣ್ ವಿರುದ್ಧ 100 ಕೋಟಿ ಮಾನಹಾನಿ ಕೇಸ್ : ಸಚಿವ ಭಗವಂತ ಖೂಬಾ


ಈ ಸಭೆಯಲ್ಲಿ ಪೌರಾಡಳಿ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ, ಜಿಲ್ಲಾ ಕೈಗಾರಿಕ ಇಲಾಖೆಯ ಉಪ ನಿರ್ದೇಶಕರಾದ ಸುರೇಖಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸೇರಿದಂತೆ ಸಂಬಂಧಿಸಿದ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಇಂಧನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್, ಡಿಸೇಲ್ ದರ ಏರಿಕೆ ವಿರೋಧಿಸಿ ವಿಜಯಪುರದಲ್ಲಿ ಎಸ್‌ಯುಸಿಐ ಕಾರ್ಯಕರ್ತರು ಪ್ರತಿಭಟನೆ...

ಹಾವೇರಿ | ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ

ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ...