ಬೀದರ್‌ | ಪೊಲೀಸರ ಭರ್ಜರಿ ಕಾರ್ಯಾಚರಣೆ : ₹2.80 ಲಕ್ಷ ಮೌಲ್ಯದ ನಶೆಯುಕ್ತ ವಸ್ತು ಜಪ್ತಿ : ಮೂವರ ಬಂಧನ

Date:

‌ಹೊಸ ವರ್ಷ ಸಂದರ್ಭದಲ್ಲಿ ಮಾರಾಟ ಮಾಡಿ, ಹೆಚ್ಚಿನ ಹಣ ಗಳಿಸಲು ಸಂಗ್ರಹಿಸಿ ಇಡಲಾಗಿದ್ದ ನಶೆ ಗುಳಿಗೆ, ಸಿರಪ್‌ಗಳನ್ನು ನಗರದ ಗಾಂಧಿ ಗಂಜ್‌ ಪೊಲೀಸರು ಜಪ್ತಿ ಮಾಡಿ, ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಗುರುವಾರ (ಡಿ.26)ರಂದು ನಗರದ ಹಾರೂರಗೇರಿ-ಲಾಡಗೇರಿ ರಸ್ತೆಯಲ್ಲಿ ಅನಧಿಕೃತವಾಗಿ ಸಾರ್ವಜನಿಕರಿಗೆ ನಾರ್ಕೊಟಿಕ್‌ ಅಂಶ ಇರುವ ಗುಳಿಗೆ ಮತ್ತು ಸಿರ್‌ಪ್‌ಗಳು ಮಾರಾಟ ಮಾಡುತಿದ್ದ. ಖಚಿತ ಮಾಹಿತಿ ಮೇರೆಗೆ ಗಾಂಧಿ ಗಂಜ್‌ ಠಾಣೆಯ ಸಿಪಿಐ ಹನುಮರೆಡ್ಡೆಪ್ಪ ನೇತ್ರತ್ವದಲ್ಲಿ ದಾಳಿ ನಡೆಸಿ ನಶೆ ವಸ್ತುಗಳನ್ನು ಜಪ್ತಿ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಶದಿಂದ ಹಾಗೂ ಮನೆಯಲ್ಲಿದ್ದ ಒಟ್ಟು ₹1.29 ಲಕ್ಷ ಮೌಲ್ಯದ 584 ನಶೆ ತರಿಸುವ ನಾರ್ಕೋಟಿಕ್ ಸಿರಪ್ ಬಾಟಲ್‌ಗಳನ್ನು ಜಪ್ತಿ ಮಾಡಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ನಶೆಯುಕ್ತ ವಸ್ತುಗಳನ್ನು ಜಪ್ತಿ ಮಾಡಿ ಆರೋಪಿಗಳನ್ನು ಬಂಧಿಸಿದ ಬಳಿಕ ಹೆಚ್ಚಿನ ವಿಚಾರಣೆಗೆ ಒಪಡಿಸಿದಾಗ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇವುಗಳನ್ನು ನಿಗದಿತ ದರಕ್ಕಿಂತ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು ಎಂದು ಎಸ್ಪಿ ಪ್ರದೀಪ ಗುಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

WhatsApp Image 2024 12 27 at 9.51.36 PM

ಚಿಟಗುಪ್ಪ ತಾಲ್ಲೂಕಿನ ಮನ್ನಾಏಖೆಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಮೀನಕೇರಾ ಗ್ರಾಮದ ಬೊಮ್ಮಗೊಂಡೇಶ್ವರ ವೃತ್ತ ಹತ್ತಿರ ಓರ್ವ ವ್ಯಕ್ತಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮನ್ನಾಏಖೆಳ್ಳಿ ಠಾಣೆ ಪಿಎಸ್‌ಐ ಮಹೇಂದ್ರಕುಮಾರ್‌ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿತನಿಂದ ₹1.50 ಲಕ್ಷ ಮೌಲ್ಯದ ಒಂದೂವರೆ ಕೆಜಿ ಗಾಂಜಾ ಜಪ್ತಿ ಮಾಡಿ, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಿಯಾಂಕ್‌ ಖರ್ಗೆ ಆಪ್ತನಿಂದ ಬೆದರಿಕೆ ಪ್ರಕರಣ; ಇಬ್ಬರು ಹೆಡ್ ಕಾನ್‌ಸ್ಟೆಬಲ್‌ಗಳ ಅಮಾನತು

ಪತ್ರಿಗೋಷ್ಠಿಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್‌, ಚಂದ್ರಕಾಂತ ಪೂಜಾರಿ, ಡಿಎಆರ್ ಡಿವೈಎಸ್ಪಿ ಶರಣಬಸಪ್ಪ ಕೂಡ್ಲಿ, ಗಾಂಧಿ ಗಂಜ್‌ ಠಾಣೆ ಸಿಪಿಐ ಹನುಮರೆಡ್ಡೆಪ್ಪ, ಚಿಟಗುಪ್ಪ ಠಾಣೆ ಸಿಪಿಐ ಶ್ರೀನಿವಾಸ ಅಲ್ಲಾಪುರೆ ಸೇರಿದಂತೆ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವೃಕ್ಷಥಾನ್ ಹೆರಿಟೇಜ್ ರನ್ 2026: ತೆರೆಮರೆಯ ಸಾಧಕರಿಗೆ ಗೌರವ

ಕ್ರೀಡೆ, ಪಾರಂಪರಿಕ ಕ್ಷೇತ್ರ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಗಮನಾರ್ಹ ಸೇವೆ...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...