ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.26ರಂದು ರೈತರ ಪ್ರತಿಭಟನೆ

Date:

Advertisements
  • ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸಿತ್ತಿದ್ದರೂ ರಾಜ್ಯ ಸರ್ಕಾರ ಬರ ಘೋಷಿಸುತ್ತಿಲ್ಲ.
  • ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ರೈತರ ಆಕ್ರೋಶ

ನಾರಾಯಣಪುರ ಬಲದಂಡೆ ಸೇರಿದಂತೆ ಕೃಷ್ಣ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳಿಗೆ ನೀರಾವರಿ ಸಲಹಾ ಸಮಿತಿ ಕೈಗೊಂಡ ಚಾಲು ಬಂದ್ ವಾರಾಬಂಧಿ ಅವೈಜ್ಞಾನಿಕವಾಗಿದ್ದು, ಪುನರ್ ಪರಿಶೀಲನೆ ಮಾಡದೇ ಇದ್ದರೆ ಆ.26 ರಂದು ದೇವದುರ್ಗದಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.

ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಕೃಷ್ಣ ಅಚ್ಚುಕಟ್ಟು ಪ್ರಾಧಿಕಾರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರ ಅಭಿಪ್ರಾಯಗಳನ್ನು ಆಲಿಸದೇ ಏಕಪಕ್ಷೀಯವಾಗಿ ನೀರು ಹರಿಸಲು ನಿರ್ಧರಿಸಲಾಗಿದೆ. ಜಲಾಶಯದಲ್ಲಿ ಒಂದು ಬೆಳೆಗೆ ಬೇಕಾಗುವಷ್ಟು ನೀರಿನ ಸಂಗ್ರಹವಿದ್ದರೂ ವಾರಾಬಂಧಿ ನಿಗದಿಪಡಿಸಲಾಗಿದೆ. ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಭತ್ತ, ಮೆಣಸಿನಕಾಯಿ ಸಸಿ ನೆಡುವ ಪ್ರಕ್ರಿಯೆ ನಡೆಯುತ್ತಿದೆ. ಹತ್ತು ದಿನ ನೀರು ಹರಿಸುವದನ್ನು ಸ್ಥಗಿತಗೊಳಿಸಿದರೆ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ. ಬಂದ್ ಮಾಡಿ ನೀರು ಪುನಃ ಹರಿಸಿದರೆ ಕೊನೆ ಭಾಗದ ರೈತರಿಗೆ ನೀರು ತಲುಪದೆ ಬೆಳೆ ಒಣಗಿ ಹೋಗುವ ಆತಂಕ ಎದುರಾಗಿದೆ” ಎಂದು ಹೇಳಿದರು.

“14 ದಿನ ನೀರು ಕೊಟ್ಟು 10 ದಿನ ಸ್ಥಗಿತಗೊಳಿಸುವ ನಿರ್ಧಾರದಿಂದ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮವಾಗುತ್ತಿದ್ದು, ಕೂಡಲೇ ಪುನರ್ ಪರಿಶೀಲಿಸಬೇಕು. ನೀರಾವರಿ ಸಲಹಾ ಸಮಿತಿಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರು ರೈತರ ಸಮಸ್ಯೆಗಳನು ತಿಳಿಯಲು ಮುಂದಾಗಿಲ್ಲ. ದೇವದುರ್ಗ ಶಾಸಕಿ ಕರೆಮ್ಮ ಅವರ ಗಮನಕ್ಕೆ ತಂದರೂ ಸ್ಪಂದಿಸಿಲ್ಲ. ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯವನ್ನು ಪುನರ್ ಪರಿಶೀಲಿಸಬೇಕು” ಎಂದು ಆಗ್ರಹಿಸಿದರು.

Advertisements

“ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸಲು ಸಿದ್ದವಿಲ್ಲ. ಎಲ್ಲಾ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಅವರ ಕಚೇರಿಗೆ ಪತ್ರ ನೀಡಲಾಗಿದೆ. ಆದರೆ ಪತ್ರವೇ ಕಚೇರಿಯಲ್ಲಿ ಇಲ್ಲವಂತೆ. ಅವರು ಲೋಕಸಭಾ ಚುನಾವಣಾ ಗುಂಗಿನಲ್ಲಿದ್ದಾರೆ. ಕೂಡಲೇ ಅವರನ್ನು ಜಲಸಂಪನ್ಮೂಲ ಸಚಿವ ಸ್ಥಾನದಿಂದ ಮುಕ್ತಗೊಳಿಸಬೇಕು. ಈ ಕುರಿತು ಸಿಎಂ ಗಮನಕ್ಕೆ ತರಲಾಗುವುದು” ಎಂದು ಹೇಳಿದರು.

“ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸುತ್ತಿವೆ. ಆದರೆ ರಾಜ್ಯ ಸರ್ಕಾರ ಬರ ಘೋಷಣೆ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಬರ ಘೋಷಣೆ ರೂಪಿಸಿರುವ ಮಾನದಂಡಗಳು ಬದಲಾಗಬೇಕಿದೆ. ಪ್ರದೇಶದಿಂದ ಪ್ರದೇಶಕ್ಕೆ ಬೆಳೆ ಪರಸ್ಥಿತಿ ಬದಲಾಗುತ್ತದೆ. ಆದರೆ ಶೇ.60% ಬೆಳೆ ಹಾನಿಯಾದರೆ ಪರಿಹಾರ ನೀಡುವುದಾಗಿ ಸರ್ಕಾರ ಹೇಳುತ್ತಿರುವುದು ಅವೈಜ್ಞಾನಿಕ ಕ್ರಮವಾಗಿದೆ” ಎಂದರು.

“ರಾಷ್ಟಿಯ ಫಸಲ್ ಭೀಮ್ ಯೋಜನೆಯಡಿ ನಡೆದಿರುವ ಅಕ್ರಮದ ತನಿಖೆಗೆ ಜೆಡಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಜಂಟಿ ನಿರ್ದೇಶಕರ ಲೋಪವೇ ಕಾರಣವಾಗಿದ್ದು, ಅವರ ಸಹದ್ಯೋಗಿಯೊಬ್ಬರಿಂದ ತನಿಖೆ ನಡೆಸಲು ಸಾಧ್ಯವಿಲ್ಲ. ತುಂಗಭದ್ರ ಎಡದಂಡೆ ಕಾಲುವೆಯಲ್ಲಿ ನೀರಿನ ಕಳ್ಳತನ ಕಡಿವಾಣ ಹಾಕುತ್ತಿಲ್ಲ. ಶೀಘ್ರದಲ್ಲಿ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ರೈತ ಸಭೆ ನಿಗದಿಯಾಗಿದೆ” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರಪಾಟೀಲ್ ಇಂಗಳದಾಳ, ಮಲ್ಲಣ್ಣ ದಿನ್ನಿ, ದೇವರಾಜ ನಾಯಕ, ಚೆನ್ನನಗೌಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X