ಬೀದರ್‌ | ಅಮಿತ್ ಶಾ ಹೇಳಿಕೆ ಖಂಡಿಸಿ ಜ.23ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜ.23ರಂದು ‘ಸಂವಿಧಾನ ವಿರುದ್ಧ ಮನುವಾದ’ ಘೋಷಣೆಯೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ.

- Advertisement -

ʼರಾಜ್ಯಸಭೆಯಲ್ಲಿ ಬಾಬಾ ಸಾಹೇಬ್‌ ಅವರ ವಿರುದ್ಧ ಕೀಳಾಗಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಆಗಬೇಕು, ಅಂಬೇಡ್ಕರ್ ಪ್ರತಿಮೆ ಮುಂಭಾಗ ಮಂಡಿಯೂರಿ ಕ್ಷಮೇ ಕೇಳಲೇಬೇಕು ಹಾಗೂ ಅಂಬೇಡ್ಕರರ ಸಂವಿಧಾನವನ್ನು ಒಪ್ಪದವರು ದೇಶ ಬಿಟ್ಟು ತೋಲಗಲಿ ಎಂಬ ಘೋಷಣೆಯೊಂದಿಗೆ ಮನುವಾದಿ ಆರ್‌ಎಸ್‌ಎಸ್ -ಬಿಜೆಪಿಯ ಮೂಲೋತ್ಪಾಟನೆಗೆ ಸನ್ನದ್ಧರಾಗಲು ಭಾಗವಹಿಸೋಣʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವಾಭಿಮಾನಿ ದಲಿತ ಯುವ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧದ ಬಿಜೆಪಿಯ ಪಿತೂರಿ ರಾಜಕಾರಣವನ್ನು ಹಿಮ್ಮೆಟ್ಟಿಸಲು ಆಗ್ರಹಿಸಿ ಜಿಲ್ಲೆಯಿಂದ ಅಂಬೇಡ್ಕರ್‌ ಅನುಯಾಯಿಗಳು, ಸಂವಿಧಾನವಾದಿಗಳು ಹೊರಡಲಿದ್ದೇವೆ. ಈ ಪ್ರತಿಭಟನೆಯಲ್ಲಿ ಜಿಲ್ಲೆಯ ದಲಿತ ಮುಖಂಡರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ರಾಜಕುಮಾರ್‌ ಬನ್ನಿ, ರಮೇಶ ಸಾಗರ್ ಮನವಿ ಮಾಡಿದರು.

ಜ.24ರಂದು ಸನ್ನತಿ ಪಂಚಶೀಲ ಪಾದಯಾತ್ರೆ ಸಮಾರೋಪ :

ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತಿ ಅಭಿವೃದ್ಧಿ ಮಂಡಳಿ ಪೂರ್ಣ ಪ್ರಮಾಣದಲ್ಲಿ ರಚಿಸಿ ಆಂಧ್ರಪ್ರದೇಶದ ಬುದ್ಧವನ ಮಾದರಿಯಲ್ಲಿ ಅಭಿವೃದ್ದಿ ಪಡಿಸಲೂ ಆಗ್ರಹಿಸಿ ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಡಿನ ಭಿಕ್ಕು ಮತ್ತು ಭಿಕ್ಕುಣಿ ಸಂಘದ ಭಂತೆ ಭೋಧಿದತ್ತ ಅವರ ನೇತೃತ್ವದಲ್ಲಿ ನವೆಂಬರ್ 15 ರಂದು ಸನ್ನತಿಯಿಂದ ಪ್ರಾರಂಭವಾದ ಪಂಚಶೀಲ ಪಾದಯಾತ್ರೆ ಸಮಾರೋಪ ಸಮಾರಂಭ ಜ.24 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಫ್ರೀಡಮ್ ಪಾರ್ಕ್‍ನಲ್ಲಿ ನಡೆಯಲಿದೆ ಎಂದು ಸಮಾರೋಪ ಸಮಾರಂಭ ಸಮಿತಿಯ ರಮೇಶ ಡಾಕುಳಗಿ ಹೇಳಿದರು.

ಗೌತಮ ಬುದ್ಧ
ಗೌತಮ ಬುದ್ಧ

ಸಮಾರೋಪ ಸಮಾರಂಭದಲ್ಲಿ ಸುಮಾರು 10ಸಾವಿರಕ್ಕೂ ಹೆಚ್ಚು ಜನರು ಶಾಂತಿಪೂರ್ವಕವಾಗಿ ಪಾದಯಾತ್ರೆಯಲ್ಲಿ ಭಾಗವಹಿಸಿ ಪ್ರೀಡಂ ಪಾರ್ಕ್ ತಲುಪಿ ಬಹಿರಂಗ ಸಭೆಯಲ್ಲಿ ಸಮಾರೋಪಗೊಳ್ಳಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ l ಆನ್‌ಲೈನ್ ಗೇಮಿಂಗ್ : ಲಕ್ಷಾಂತರ ಹಣ ಕಳೆದುಕೊಂಡ ಯುವಕ ಅತ್ಮಹತ್ಯೆ 

ಈ ಅಂತಿಮ ಘಟ್ಟದ ಪಾದಯಾತ್ರೆಯಲ್ಲಿ ಕರ್ನಾಟಕ ರಾಜ್ಯದ ಸಮಸ್ತ ಬಿಕ್ಕು ಸಂಘ ಬೌದ್ಧ ಸಂಘ ಸಂಸ್ಥೆಗಳು, ಎಲ್ಲಾ ದಲಿತ ಸಂಘರ್ಷ ಸಮಿತಿಗಳ ರಾಜ್ಯ ಸಂಚಾಲಕರು, ಮುಖಂಡರು, ನೌಕರರು, ವಿದ್ಯಾರ್ಥಿ ಯುವಜನರು, ಕಾರ್ಮಿಕರು, ಮಹಿಳೆಯರು ಮತ್ತು ಪ್ರಗತಿಪರ ಚಿಂತಕರು ಭಾಗವಹಿಸುವರು. ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಹೀಗಾಗಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶ್ವಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಯುವ ಸಂಸತ್‍ನಲ್ಲಿ ಮಹತ್ವದ ಚರ್ಚೆ

ಬೀದರ್ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶನಿವಾರ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...