ದಲಿತರ ಮೇಲಿನ ಸರಣಿ ದೌರ್ಜನ್ಯ ಖಂಡಿಸಿ ಶಿರಸಿಯಲ್ಲಿ ಶೀಘ್ರದಲ್ಲೇ ಬೃಹತ್ ಪ್ರತಿಭಟನೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ದಲಿತರು, ಮೂಲನಿವಾಸಿಗಳು ಹಾಗೂ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ಸರಣಿ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಆಡಳಿತ ಯಂತ್ರದ ನಿರ್ಲಕ್ಷ್ಯವನ್ನು ವಿರೋಧಿಸಿ ಶಿರಸಿಯಲ್ಲಿ ಶೀಘ್ರದಲ್ಲೇ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಭೀಮಗರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ತಿಳಿಸಿದ್ದಾರೆ.

- Advertisement -

ಜಿಲ್ಲೆಯ ವಿವಿಧ ಭಾಗಗಳಲ್ಲಿ ದಲಿತರ ಭೂಮಿ, ನಿವಾಸ ಹಾಗೂ ಆತ್ಮಗೌರವಕ್ಕೆ ಧಕ್ಕೆ ತರುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದು, ಧನಬಲ ಮತ್ತು ಅಧಿಕಾರದ ಪ್ರಭಾವದಿಂದ ಶೋಷಿತ ಸಮುದಾಯಗಳ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ಹಿನ್ನೆಲೆಯಲ್ಲಿ ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳಿಗೆ ತಕ್ಷಣ ಕಡಿವಾಣ ಹಾಕುವಂತೆ ಆಗ್ರಹಿಸಿ ಭೀಮಗರ್ಜನೆ ಸಂಘಟನೆಯ ನೇತೃತ್ವದಲ್ಲಿ ಶಿರಸಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಶಿಕ್ಷಕರ ಪ್ರಾಮಾಣಿಕ ಸೇವೆಯಿಂದ ಉತ್ತರ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಮೂರನೇ ಸ್ಥಾನ: ಲಕ್ಷ್ಮಣ ಸವದಿ

ಪ್ರಮುಖ ಬೇಡಿಕೆಗಳು ಪ್ರತಿಭಟನೆಯ ಮೂಲಕ ಸರ್ಕಾರ ಹಾಗೂ ಆಡಳಿತಕ್ಕೆ ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಲಾಗುವುದು. ಅಟ್ರಾಸಿಟಿ ಪ್ರಕರಣಗಳಲ್ಲಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಅಥವಾ ಸುಲಭವಾಗಿ ಸ್ಟೇ ಹಾಗೂ ಜಾಮೀನು ದೊರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಅದೇ ರೀತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 18 ಮತ್ತು 18A ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ವಿರುದ್ಧ ಸುಳ್ಳು ಕೌಂಟರ್ ಪ್ರಕರಣಗಳನ್ನು ದಾಖಲಿಸುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಲಾಗಿದೆ.

ಇದರೊಂದಿಗೆ, ಉತ್ತರ ಕನ್ನಡ ಜಿಲ್ಲೆಯ ಕೇಂದ್ರ ಸ್ಥಾನವಾದ ಕಾರವಾರಕ್ಕೆ ಪ್ರತ್ಯೇಕ ಅಟ್ರಾಸಿಟಿ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಹಾಗೂ ಅಟ್ರಾಸಿಟಿ ಪ್ರಕರಣಗಳಲ್ಲಿ ಸಂತ್ರಸ್ತ ದಲಿತ ಕುಟುಂಬಗಳ ಪರವಾಗಿ ಪರಿಣಾಮಕಾರಿಯಾಗಿ ವಾದಿಸಲು ಕಾಯ್ದೆಯ ಸೆಕ್ಷನ್ 15ರ ಅಡಿಯಲ್ಲಿ ಅನುಭವ ಹೊಂದಿರುವ ವಿಶೇಷ ಅಭಿಯೋಜಕರನ್ನು ಸರ್ಕಾರ ತಕ್ಷಣ ನೇಮಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ದಲಿತರು ಹಾಗೂ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ಅನ್ಯಾಯದ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಧ್ವನಿ ಎತ್ತಬೇಕು. ನ್ಯಾಯ ಮತ್ತು ಸಮಾನತೆಯ ಹೋರಾಟಕ್ಕೆ ಭೀಮಬಂಧುಗಳು ಹಾಗೂ ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅರ್ಜುನ್ ಮಿಂಟಿ ಮನವಿ ಮಾಡಿದ್ದಾರೆ.

ಪ್ರತಿಭಟನಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಭೀಮಗರ್ಜನೆ ಸಂಘಟನೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...