ಸರ್ಕಾರದ ವಿರುದ್ಧ ಯಡಿಯೂರಪ್ಪ ನೇತೃತ್ವದಲ್ಲಿ ಆ. 23ರಂದು ಬೃಹತ್ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ

Date:

  • ಬೆಂಗಳೂರಿನಲ್ಲಿ ಬುಧವಾರ (ಆ.​23) ಪ್ರತಿಭಟನೆ
  • ‘ಸರ್ಕಾರದಲ್ಲಿ ಸರ್ವಾಧಿಕಾರ ನಡವಳಿಕೆ ಕಾಣುತ್ತಿದೆ’

ವರ್ಗಾವಣೆಯಲ್ಲಿ ಭ್ರಷ್ಟಾಚಾರ ಮತ್ತು ಗುತ್ತಿಗೆದಾರರ ಕಮಿಷನ್​ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬುಧವಾರ (ಆ.​23) ಬಿ ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮೂರು ತಿಂಗಳಲ್ಲಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಜನರು ಬೇಸತ್ತಿದ್ದಾರೆ. ತಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕವಾಗಿ ಹಿಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಪ್ರಮುಖವಾಗಿ ಈ ಸರ್ಕಾರದಲ್ಲಿ ಸರ್ವಾಧಿಕಾರ ನಡವಳಿಕೆ ಎದ್ದು ಕಾಣುತ್ತಿದೆ” ಎಂದು ಟೀಕಿಸಿದರು.

“ಸರ್ಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾಂಗ್ರೆಸ್​ನ ಪಂಚ ಯೋಜನೆಗಳು ಕೇವಲ ಹೆಸರಿಗೆ ಮಾತ್ರ. ಕೊಟ್ಟ ಭರವಸೆ ಈಡೇರಿಸಲು ಅವರಿಂದ ಸ್ಯಾಧ್ಯವಾಗಿಲ್ಲ” ಎಂದು ದೂರಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್‌ ಹಸ್ತದ ಚರ್ಚೆ: ನಿರ್ಲಜ್ಜ ರಾಜಕೀಯ ನಡೆಗಳು

“ಪಕ್ಷದ ನಾಯಕರೆಲ್ಲರೂ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್‌ನ ಶಾಸಕರು ದಂಗೆ ಎದ್ದಿದ್ದಾರೆ ಎಂಬ ಸತ್ಯವನ್ನು ಮರೆಮಾಚಲು ಅವರು ಪಕ್ಷಾಂತರ ಬಗ್ಗೆ ಸುಳ್ಳು ಕಥೆಗಳನ್ನು ಕಟ್ಟುತ್ತಿದ್ದಾರೆ. ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ. ಸ್ಥಳೀಯವಾಗಿ ಕೆಲವು ಸಮಸ್ಯೆಗಳಿವೆ. ನಾವು ಇದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ; ಜೀಪಿನಲ್ಲಿ ಹುಚ್ಚಾಟ ಮೆರೆದ ವ್ಯಕ್ತಿಯ ಬಂಧನ

ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದು, ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ...

2028ರೊಳಗೆ ಜಿಲ್ಲೆಗೆ ಮತ್ತೆ ರಾಮನಗರ ಹೆಸರು ಬರುತ್ತದೆ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ರಾಮನ ಹೆಸರಿದೆ. ಭೂಮಿ ಇರುವವರೆಗೂ ರಾಮನಗರ ಹೆಸರನ್ನು ತೆಗೆಯಲು...

ಹುಣಸೂರು | ಸೋರುತ್ತಿದೆ ಆರ್‌ಟಿಓ ಕಚೇರಿ ಮಾಳಿಗೆ; ಅಧಿಕಾರಿಗಳಿಗೇ ಇಲ್ಲ ಮೂಲ ಸೌಕರ್ಯ!

ಮೈಸೂರು ಜಿಲ್ಲೆ ಹುಣಸೂರಿನ ಆರ್‌ಟಿಓ ಕಚೇರಿ ಹಳೆಯ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು,...

‘ಬಜೆಟ್ ಪಕ್ಷಪಾತ, ರಾಜ್ಯಗಳನ್ನು ವಿಭಜಿಸುವ ಪಿತೂರಿ’; ನೀತಿ ಆಯೋಗ ಸಭೆಯಲ್ಲಿ ಪ್ರತಿಭಟನೆಗೆ ಮಮತಾ ಸಜ್ಜು

ಜುಲೈ 27 ರಂದು ದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಾಗಿ...