ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಕುಮಾರಸ್ವಾಮಿ ಬೇಗ ಗುಣಮುಖರಾಗಲಿ: ಸಿಎಂ ಸಿದ್ದರಾಮಯ್ಯ ತಿರುಗೇಟು

Date:

  • ಚುನಾವಣಾ ಸೋಲಿನಿಂದ ಕುಮಾರಸ್ವಾಮಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ
  • ‘ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ’ ಎಂದು ಬರೆದುಕೊಂಡಿದ್ದ ಎಚ್‌ಡಿಕೆ

ಎಚ್‌ ಡಿ ಕುಮಾರಸ್ವಾಮಿ, ಇತ್ತೀಚೆಗೆ ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆ ಗಮನಿಸಿದರೆ ಚುನಾವಣೆ ಸೋಲಿನ ಆಘಾತದಿಂದಾಗಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಕಾಣುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

- Advertisement -

ಈ ಕುರಿತು ಅವರು ಟ್ವಿಟರ್‌ನಲ್ಲಿ ಕುಮಾರಸ್ವಾಮಿ ಪೋಸ್ಟ್‌ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, “ಕುಮಾರಸ್ವಾಮಿ, ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ. ಇನ್ನು ಅವರು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ-ಅಸಲಿ ವಿಚಾರ ಶೀಘ್ರದಲ್ಲಿಯೇ ತನಿಖೆಯಿಂದ ಹೊರಬೀಳಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಕುಮಾರಸ್ವಾಮಿ ಪೋಸ್ಟ್‌ನಲ್ಲಿ ಏನಿದೆ?

‘ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ.’

‘ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ.’

1 3

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲಿತ ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ತಿರುಗಿಸಿದ ಮೋಸ

‘ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿ ಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು.’

‘ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್‌ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ?’

‘ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?’

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...