ಯಾದಗಿರಿ | ವಿದ್ಯುತ್ ದರ ಏರಿಕೆಗೆ ಎಸ್‌ಯುಸಿಐ(ಸಿ) ಖಂಡನೆ

Date:

  • ನಷ್ಟದ ನೆಪವೊಡ್ಡಿ ಜನರಿಗೆ ಹೊರೆ ಹೊರಿಸುವುದು ಸರಿಯಲ್ಲ
  • ನೂತನ ಸರ್ಕಾರವು ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯಲಿ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆ.ಇ.ಆರ್.ಸಿ) ಏಪ್ರಿಲ್ 01 ರಿಂದಲೇ ಜಾರಿಯಾಗುವಂತೆ ಪ್ರತಿ ಯುನಿಟ್‌ಗೆ 0.70 ಪೈಸೆ ದರ ಹೆಚ್ಚಿಸಿರುವುದನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) (ಎಸ್‌ಯುಸಿಐ (ಸಿ)) ಪಕ್ಷದ ಯಾದಗಿರಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಕಾರ್ಯದರ್ಶಿ ಎಸ್‌ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಕೆ ಸೋಮಶೇಖರ್  ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಧಾನಸಭಾ ಚುನಾವಣೆ ಮುಕ್ತಾಯವಾಗುವುದಕ್ಕೆ ಕಾಯುತ್ತಿದ್ದು, ಅದರ ಬೆನ್ನಲ್ಲೇ ಕೆ.ಇ.ಆರ್.ಸಿ ಯು ವಿದ್ಯುತ್ ದರ ಹೆಚ್ಚಿಸಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಇರುವುದು, ಅದರ ಜನವಿರೋಧಿ ಧೋರಣೆಯನ್ನು ಪ್ರತಿ ಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ.

ಸದಾಕಾಲ ಕೆ.ಇ.ಆರ್.ಸಿ ನಷ್ಟದಲ್ಲಿದೆ ಎಂಬ ನೆಪವೊಡ್ಡಿ, ಸಾಮಾನ್ಯ ಜನರ ಹೆಗಲ ಮೇಲೆ ಈ ಭಾರ ಹೊರಿಸುವುದು ಖಂಡನೀಯ. ಈಗಾಗಲೇ ಜನಸಾಮಾನ್ಯರು ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದು, ಈ ಭಾರವನ್ನು ಹೊರಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಜೀವನಾವಶ್ಯಕತೆಗಳಲ್ಲಿ ಒಂದಾಗಿರುವ ವಿದ್ಯುತ್ತನ್ನ ಜನರ ಕೈಗೆಟಕುವ ದರದಲ್ಲಿ ನೀಡುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಧಿಕಾರ ವಹಿಸಿಕೊಳ್ಳುವ ನೂತನ ಸರ್ಕಾರವು ಕೂಡಲೇ ಈ ದರ ಏರಿಕೆಯನ್ನು ಪರಿಶೀಲಿಸಿ ಜನವಿರೋಧಿಯಾದ ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾರಾಗ್ತಾರೆ ರಾಜ್ಯದ ಮುಖ್ಯಮಂತ್ರಿ?; ಮಂಗಳವಾರ ದೆಹಲಿಯತ್ತ ಡಿಕೆಶಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಲೋಕಸಭಾ ಕ್ಷೇತ್ರ | ಅಂತಿಮ ಕಣದಲ್ಲಿ 18 ಅಭ್ಯರ್ಥಿಗಳು

ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂತಿಮವಾಗಿ 18 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿ...

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...

ಬೀದರ್‌ | ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ಬೀದರ್‌ ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ...