ಕೋಮು ಭಾವನೆ ಹೆಸರಲ್ಲಿ ‘ಸೂಲಿಬೆಲೆ’ ನಾಟಕ ಮಾಡಿದರೆ ಜೈಲು ಗ್ಯಾರಂಟಿ: ಎಂ ಬಿ ಪಾಟೀಲ

Date:

ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು. ನಾಟಕ ಮಾಡಿದ್ರೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎಚ್ಚರಿಕೆ ಕೊಟ್ಟಿದ್ದಾರೆ.

ವಿಜಯಪುರ ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಏನ್‌ ಅನಾಹುತ ಮಾಡಿದ್ದಾರೆ ಅಂತ ಕೇಳಿ. ಸೂಲಿಬೆಲೆ ಮಾಡಿದ ಅನಾಹುತಗಳನ್ನು ನಾವು ಸರಿಪಡಿಸುತ್ತಿದ್ದೇವೆ” ಎಂದರು.

“ಪಠ್ಯಪುಸ್ತಕ, ಹಿಜಾಬ್, ಹಲಾಲ್, ಆಜಾನ್ ಅಂತೇಳಿ ಬಹಳ ನಾಟಕ ಮಾಡಿದ್ದಾರೆ. ಇನ್ಮುಂದೆ ಇಂಥ ನಾಟಕ ಮಾಡಿದ್ರೆ ಸೂಲಿಬೆಲೆಗೆ ಜೈಲು ಗ್ಯಾರಂಟಿ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸೂಲಿಬೆಲೆಗೆ ಜನರು ಕೇಸರಿ ಗುತ್ತಿಗೆ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ ಬಿಜೆಪಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿತು. ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ” ಎಂದು ತಿಳಿಸಿದರು.

“ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ.4 ಮೀಸಲಾತಿ, ಮತಾಂತರ ನಿಷೇಧ ಕಾನೂನು ಹಿಂಪಡೆಯುವುದು ಸೇರಿದಂತೆ ಅಹಿಂದ ಸಂಘಟನೆಯ ಬೇಡಿಕೆ ಈಡೇರಿಸುವ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಐದು ತಿಂಗಳ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಅಟಲ್ ಸೇತು ರಸ್ತೆಯಲ್ಲಿ ಬಿರುಕು!

ಈ ವರ್ಷದ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಮುಂಬೈನ...

ನಾಗೇಂದ್ರ ರಾಜೀನಾಮೆ ಹಿನ್ನೆಲೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಝಮೀರ್ ಅಹಮದ್ ಹೆಗಲಿಗೆ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್...

ತುಮಕೂರು | ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ ಏಳಕ್ಕೆ ಏರಿಕೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ...