ಉಡುಪಿ | ಮಾದಕ ವಸ್ತು ಸಾಗಾಟ, ಯುವಕನ ಬಂಧನ, ಆಟೋರಿಕ್ಷಾ ವಶ

Date:

ಮಾದಕ ವಸ್ತು ಸಾಗಾಟದ ವಿರುದ್ಧ ಉಡುಪಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂ.ಡಿ.ಎಂ.ಎ (MDMA) ಪೌಡರ್ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ನೇತೃತ್ವದ ತಂಡವು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಕರಂಬಳ್ಳಿ ರಾಮಬೆಟ್ಟು ಸಮೀಪ ಸಾರ್ವಜನಿಕ ಸ್ಥಳದಲ್ಲಿ ಈ ಕಾರ್ಯಾಚರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆಟೋರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟಕ್ಕೆ ತೊಡಗಿದ್ದ ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆ ಮಸೀದಿ ಹತ್ತಿರದ ನಿವಾಸಿ ಅಬ್ದುಲ್ ರೌಫ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಆರೋಪಿಯಿಂದ 7.59 ಗ್ರಾಂ ತೂಕದ ಎಂ.ಡಿ.ಎಂ.ಎ ಪೌಡರ್ (ಅಂದಾಜು ಮೌಲ್ಯ ರೂ.15,000), ಮಾದಕ ವಸ್ತು ಮಾರಾಟದಿಂದ ಗಳಿಸಿದ್ದ ರೂ.3,100 ನಗದು ಹಾಗೂ ಸಂಖ್ಯೆಯ ಕಪ್ಪು–ಹಳದಿ ಬಣ್ಣದ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ.3,23,100 ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಭರತೇಶ್ ಕಂಕಣವಾಡಿ, ಗೋಪಾಲ ಕೃಷ್ಣ ಜೋಗಿ ಸೇರಿದಂತೆ ಸಿಬ್ಬಂದಿಗಳಾದ ಹರೀಶ್ ನಾಯ್ಕ, ಪ್ರಸನ್ನ ಸಿ., ನೇತ್ರಾವತಿ, ಸತೀಶ್ ಪಳ್ಳಿ, ಹೇಮಂತ್ ಕುಮಾರ್, ಸಂತೋಷ್ ರಾಥೋಡ್ ಹಾಗೂ ಆನಂದ್ ಅವರುಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...