ಕೇಂದ್ರ ಗೃಹ ಸಚಿವರ ಭೇಟಿ, ಅಕ್ಕಿ ಸರಬರಾಜು ಬಗ್ಗೆ ಪ್ರಸ್ತಾಪ: ಸಿಎಂ ಸಿದ್ದರಾಮಯ್ಯ

Date:

  • ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ: ಸಿಎಂ ಆರೋಪ
  • ಛತ್ತೀಸಗಢ ಸರ್ಕಾರ ಒಂದು ತಿಂಗಳಿಗೆ ಮಾತ್ರ ಅಕ್ಕಿ ನೀಡಲು ಮುಂದೆ ಬಂದಿದೆ

ರಾಷ್ಟ್ರಪತಿಯವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಲಾಗಿದೆ. ಇಂದು ಸಂಜೆ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಲಿದ್ದು, ಪ್ರಾಸಂಗಿಕವಾಗಿ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡುವ ಉದ್ದೇಶವಿದೆ. ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಪ್ರಸ್ತಾಪ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವದೆಹಲಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, “ಭಾರತೀಯ ಆಹಾರ ನಿಗಮ (ಎಫ್‌ಸಿಐ) ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ” ಎಂದರು.

“ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರಮುಖೇನ ತಿಳಿಸಿದ್ದರು. ಆದರೆ ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್‌ಸಿಐಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದೆ ಎಂದಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿ ಮೋದಿಗೆ ಸ್ವದೇಶದ ಸಮಸ್ಯೆಗಳಿಗಿಂತ ವಿದೇಶದ ಜಯಘೋಷಗಳೇ ಪ್ರಿಯವಾದವೇ?

“ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯುವ ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸಗಢ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...