ಮೇಕೆದಾಟು | ಸಹಕಾರ ಕೋರಿ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುವೆ: ಡಿಕೆ ಶಿವಕುಮಾರ್

Date:

  • ಮೇಕೆದಾಟು ಯೋಜನೆ ಎರಡು ರಾಜ್ಯಗಳ ರೈತರ ಹಿತ ಕಾಯಲಿದೆ
  • ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ: ಡಿಕೆಶಿ

ಮೇಕೆದಾಟು ಯೋಜನೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ರೈತರ ಹಿತ ಕಾಯಲಿದೆ. ಹೀಗಾಗಿ ನಾನು ತಮಿಳುನಾಡು ಸರ್ಕಾರ ಹಾಗೂ ನಾಯಕರಿಗೆ ಈ ವಿಚಾರದಲ್ಲಿ ಹೃದಯವೈಶಾಲ್ಯತೆ ಪ್ರದರ್ಶಿಸಿ, ಸಹಕಾರ ನೀಡುವಂತೆ ಮನವಿ ಮಾಡುತ್ತೇನೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ ನಮಗಿಂತ ಹೆಚ್ಚು ತಮಿಳುನಾಡಿಗೆ ಅನುಕೂಲವಾಗಲಿದೆ. ಕರ್ನಾಟಕ ಬಳಸಿಕೊಳ್ಳಲಾಗದ ನೀರು ತಮಿಳುನಾಡಿಗೆ ಸೇರಲಿದೆ. ಈ ನೀರನ್ನು ಸಂಕಷ್ಟದ ಸಮಯದಲ್ಲಿ ಬಳಸಿಕೊಳ್ಳಲು ಈ ಯೋಜನೆ ಅಗತ್ಯವಿದೆ” ಎಂದರು.

“ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ವಾಸ್ತವಾಂಶ ನ್ಯಾಯಾಲಯದ ಮುಂದಿಟ್ಟಿದ್ದೇವೆ. ಕಾವೇರಿ ವಿಚಾರವಾಗಿ ಈಗಾಗಲೇ ನಮ್ಮ ತಂಡ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದೆ. ನಾನು ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ಮಾಡಲಿದ್ದೇನೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಯಾರಿಗೆ ಎಷ್ಟು ಗೌರವ ಕೊಡಬೇಕು ಎಂಬುದನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ: ಡಿಕೆ ಶಿವಕುಮಾರ್

“ಕರ್ನಾಟಕದಲ್ಲಿ ನೀರಿದೆ. ಇದಕ್ಕಾಗಿಯೇ ನೀರು ಬಿಡುಗಡೆ ಮಾಡಿದ್ದು, ಈಗ ಸುಪ್ರೀಂ ಕೋರ್ಟ್ ಮುಂದೆ ನೀರಿಲ್ಲ ಎಂದು ಹೇಳುತ್ತಿದೆ” ಎಂಬ ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ಹೇಳಿಕೆಗೆ ಪ್ರತಿಕ್ರಿಯಿಸಿ, “ಈ ವಿಚಾರವಾಗಿ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ವಾಸ್ತವಾಂಶವನ್ನು ನ್ಯಾಯಾಲಯದ ಮುಂದಿಟ್ಟಿದ್ದೇವೆ. ಇದು ತಾಂತ್ರಿಕ ವಿಚಾರವಾಗಿದ್ದು, ನಾವು ಅಣೆಕಟ್ಟುಗಳಲ್ಲಿನ ಒಳಹರಿವಿನ ಮಾಹಿತಿ ಹಂಚಿಕೊಂಡಿದ್ದೇವೆ” ಎಂದರು.

ಕಾವೇರಿ ವಿಚಾರವಾಗಿ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗುತ್ತಿರುವುದು ರಾಜಕೀಯ ಮಾಡಲು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರಲ್ಲ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಕೋರ್ಟ್ ಈ ವಿಚಾರದಲ್ಲಿ ಏನು ಹೇಳಬೇಕೋ ಹೇಳಿದೆ. ಅವರಿಗೆ ಕರ್ನಾಟಕ ರಾಜ್ಯದ ಬಗ್ಗೆ ಹಿತಾಸಕ್ತಿ ಇದ್ದರೆ ಅವರು ನಮ್ಮ ಜೊತೆ ಸೇರಿ ರಾಜ್ಯದ ಪರವಾಗಿ ಧ್ವನಿ ಎತ್ತಲಿ. ಇಲ್ಲದಿದ್ದರೆ ನಮ್ಮ ಕರ್ತವ್ಯ ಮಾಡುತ್ತೇವೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

ಕಾಂಗ್ರೆಸ್ ಪಕ್ಷ ಬೆಂಬಲಿಸಲು ಪಿಟಿಸಿಎಲ್ ಹೋರಾಟ ಸಮಿತಿ ನಿರ್ಧಾರ

ಬೆಂಗಳೂರು: ದಲಿತರು, ಸಂವಿಧಾನ ವಿರೋಧಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ...

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....