ಕಾಂಗ್ರೆಸ್ ಪಕ್ಷದ ಸೇವಾದಳ ಯಂಗ್ ಬ್ರಿಗೇಡ್ ವಿಭಾಗದ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು ಎಂದು ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ.ತಿಳಿಸಿದ್ದಾರೆ.
“ನ.20ರಿಂದ ಒಂದು ತಿಂಗಳ ಕಾಲ ಈ ಅಭಿಯಾನ ಜರುಗಲಿದ್ದು, ಕಾಂಗ್ರೆಸ್ ಮತ್ತು ಜಾತ್ಯತೀತ ವಿಚಾರಧಾರೆಗಳನ್ನು ಹೊಂದಿರುವ ಯುವಕರು ಬ್ರಿಗೇಡ್ ಸದಸ್ಯತ್ವವನ್ನು ಪಡೆದುಕೊಳ್ಳಬಹುದಾಗಿದೆ” ಎಂದು ಅವರು ಹೇಳಿದರು.

ಯುವಕರು ಸಕ್ರಿಯ ರಾಜಕಾರಣ ಮತ್ತು ಮಾನವೀಯ ಸಿದ್ಧಾಂತಗಳಲ್ಲಿ ತೊಡಗಬೇಕು ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಶಯದಂತೆ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಹೀಗಾಗಿ, ಪ್ರತಿ ಗ್ರಾಪಂ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಈ ಅಭಿಯಾನ ನಡೆಸಲಾಗುತ್ತಿದ್ದು, 18 ವರ್ಷ ಮೇಲ್ಪಟ್ಟ ಹಾಗೂ 38 ವರ್ಷದೊಳಗಿನ ಯುವಕರು ಮಾತ್ರ ಈ ಸದಸ್ಯತ್ವವನ್ನು ಪಡೆಯಬಹುದಾಗಿದೆ ಎಂದರು.
ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9980080202 ಅನ್ನು ಸಂಪರ್ಕಿಸಬಹುದು ಎಂದು ಜುನೈದ್ ಪಿ ಕೆ ತಿಳಿಸಿದ್ದಾರೆ.
