ಟಿಪ್ಪರ್ ಲಾರಿಗಳ ಹಾವಳಿ; ರೇಷ್ಮೆ ಹುಳು ರಸ್ತೆಗೆ ಸುರಿದು ರೈತರ ಪ್ರತಿಭಟನೆ

Date:

ಸಮೀಪದಲ್ಲೇ ಇರುವ ಕ್ರಷರ್‌ನಿಂದ ಜಲ್ಲಿ ಮತ್ತು ಜಲ್ಲಿ ಪುಡಿ ತುಂಬಿಕೊಂಡು ಸಂಚರಿಸುವ ಲಾರಿಗಳಿಂದಾಗಿ ಸುತ್ತಮುತ್ತ ರೈತರಿಗೆ ಸಮಸ್ಯೆಯಾಗುತ್ತಿದೆ. ಲಾರಿಗಳಿಂದ ಏಳುವ ಧೂಳು ರೇಷ್ಮೆ ಹುಳು ತಿನ್ನುವ ಹಿಪ್ಪು ನೇರಳೆ ಸೊಪ್ಪಿನ ಮೇಲೆ ತುಂಬಿಕೊಳ್ಳುತ್ತಿದೆ. ಅದನ್ನು ತಿಂದು ರೇಷ್ಮೆ ಹುಳುಗಳು ಸಾಯುತ್ತಿವೆ. ರೈತರು ನಷ್ಟ ಅನುಭವಿಸುವಂತಾಗಿದೆ ಎಂದು ರೈತರು ಆರೋಪಿಸಿದ್ದಾರೆ. ರೇಷ್ಮೆ ಹುಳುಗಳನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದ್ದಾರೆ.

- Advertisement -

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಾಳಿಂಬ ಗ್ರಾಮದ ರೈತರು ರಸ್ತೆಗೆ ರೇಷ್ಮೆ ಹುಳು ಮತ್ತು ಹಿಪ್ಪು ನೇರಳೆ ಸೊಪ್ಪು ಸುರಿದು ಪ್ರತಿಭಟನೆ ನಡೆಸಿದ್ದಾರೆ. ತಮ್ಮೂರಿನ ಮಾರ್ಗದಲ್ಲಿ ಟಿಪ್ಪರ್‌ ಲಾರಿ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಗ್ರಾಮದ ಪಕ್ಕದ ಗ್ರಾಮಗಳಾದ ಸಾತನೂರು, ನರೀಪುರ ನಡುವೆ ಕ್ರಷರ್‌ಗಳಿದ್ದು, ಅಲ್ಲಿಂದ ಜಲ್ಲಿ ಮತ್ತು ಜಲ್ಲಿ ಪುಡಿಯನ್ನು ತುಂಬಿಕೊಂಡು ಟಿಪ್ಪರ್‌ ಲಾರಿಗಳು ತಮ್ಮೂರಿನ ರಸ್ತೆಯಲ್ಲಿ ಹಾದುಹೋಗುತ್ತವೆ. ಇದರಿಂದಾಗಿ ರಸ್ತೆಯ ಇಕ್ಕೆಲಗಳಲ್ಲಿರುವ ಜಮೀನುಗಳಿಗೆ ಧೂಳು ಆವರಿಸುತ್ತಿದೆ. ಜಮೀನಿನಲ್ಲಿ ಹಿಪ್ಪು ನೇರಳೆ ಸೊಪ್ಪು ಬೆಳೆಯಲಾಗಿದ್ದು, ಧೂಳು ತುಂಬಿದ ಸೊಪ್ಪು ತಿಂದು ರೇಷ್ಮೆ ಹುಳುಗಳು ಸಾಯುತ್ತಿವೆ ಎಂದು ಆರೋಪಿಸಿದ್ದಾರೆ.

“ರಸ್ತೆಯಲ್ಲಿ ಧೂಳು ಬಾರದಂತೆ ರಸ್ತೆಗೆ ನೀರು ಸಿಂಪಡಿಸಿ ಮತ್ತು ಕಡಿಮೆ ಪ್ರಮಾಣದ ಜಲ್ಲಿ ತುಂಬಿಕೊಂಡು ಹೋಗುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೂ, ಕ್ರಷರ್ ಮಾಲೀಕರು ಮತ್ತು ಲಾರಿ ಚಾಲಕರು ನಮ್ಮ ಮಾತಿಗೆ ಕಿವಿಗೊಡುತ್ತಿಲ್ಲ. ಹೀಗಾಗಿ, ತಮ್ಮೂರಿನ ರಸ್ತೆಯಲ್ಲಿ ಟಿಪ್ಪರ್ ಲಾರಿಗಳ ಸಂಚಾರವನ್ನೇ ನಿರ್ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...