ಚಿಕ್ಕಬಳ್ಳಾಪುರ | ಮೀಟರ್ ದರ ಏರಿಕೆ ಖಂಡಿಸಿ ಫೆ.24ರಂದು ಪ್ರತಿಭಟನೆ

Date:

ಮೀಟರ್‌ಗಳ ಬೆಲೆ ಏರಿಕೆ, ನೀರಾವರಿ ಪಂಪ್‌ಸೆಟ್‌ಗಳಿಗೆ ಮೂಲಸೌಲಭ್ಯ ಕಲ್ಪಿಸಲು ಹೆಚ್ಚಿನ ಬೆಲೆ ನಿಗದಿ ಮಾಡಿರುವುದು, ಗುತ್ತಿಗೆದಾರರ ಪರವಾನಗಿ ದರ ಹೆಚ್ಚಳ ಸೇರಿದಂತೆ ವಿದ್ಯುತ್‌ ಸರಬರಾಜು ಕಂಪನಿಗಳು ವಿವಿಧ ಸೌಲಭ್ಯಗಳ ಬೆಲೆ ಏರಿಕೆಯನ್ನು ಖಂಡಿಸಿ ಫೆ.24ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಟಿ.ಎಸ್.ಬಾಬು ಹೇಳಿದರು.

- Advertisement -

ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾವಿರ ರೂಪಾಯಿಯ ಮಾಪಕವನ್ನು ಏಕಾಏಕಿ 4998ರೂ., 2500 ರೂಪಾಯಿಯ ಮಾಪಕದ ಬೆಲೆಯನ್ನು 8800ರೂ. ಮತ್ತು 3500 ರೂ. ಇದ್ದ ಮಾಪಕದ ಬೆಲೆಯನ್ನು 28080 ರೂಪಾಯಿಗೆ ಏಕಾಏಕಿ ಬೆಲೆ ಏರಿಕೆ ಮಾಡಿದ್ದು, ಸರ್ಕಾರ ಮತ್ತು ವಿದ್ಯುತ್‌ ಸರಬರಾಜು ಕಂಪನಿಗಳು ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿದ್ಯುತ್‌ ಪರಿವೀಕ್ಷಣಾಲಯದಿಂದ ಗುತ್ತಿಗೆದಾರರ ಪರವಾನಗಿ ಪಡೆಯಲು ಈ ಹಿಂದೆ ಪ್ರಥಮ ದರ್ಜೆ ಪರವಾನಗಿಗೆ 3000 ರೂ. ಇತ್ತು, ಇದೀಗ 10000ಕ್ಕೆ ಏರಿಸಲಾಗಿದೆ. ಸೂಪರ್‌ ಗ್ರೇಡ್‌ ಪರವಾನಗಿ ದರವನ್ನು 5000 ದಿಂದ 50000 ರೂ.ಗೆ ಏರಿಕೆ ಮಾಡಲಾಗಿದೆ. ಇದನ್ನು ಸರ್ಕಾರ ಪುನರ್‌ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

ರೈತ ಸಂಘ ಜಿಲ್ಲಾಧ್ಯಕ್ಷ ಗೋಪಾಲ್‌ ಮಾತನಾಡಿ, ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಈ ಹಿಂದೆ ಅಕ್ರಮಸಕ್ರಮ ಯೋಜನೆಯಡಿಯಲ್ಲಿ 30 ಸಾವಿರ ರೂ. ನಿಗದಿಯಾಗಿತ್ತು. ಆದರೆ, ಇದೀಗ ಇದ್ದಕ್ಕಿದ್ದಂತೆ 2 ಲಕ್ಷದಿಂದ 10 ಲಕ್ಷದವರೆಗೆ ಏರಿಕೆಯಾಗಿದ್ದು, ಇದರಿಂದ ರೈತರಿಗೆ ದೊಡ್ಡ ಹೊರೆಯಾಗಲಿದೆ ಎಂದು ಕಿಡಿಕಾರಿದರು.

ಸ್ವಯಂ ಕಾಮಗಾರಿಯಲ್ಲಿ ಅಳವಡಿಸಿರುವ 25 ಕೆವಿಎ ವಿದ್ಯುತ್‌ ಪರಿವರ್ತಕ ಚಾಲ್ತಿಗೆ ಸರ್ಕಾರ 3400 ರೂ.ಗಳಿಂದ 9500 ರೂ.ಗಳಿಗೆ ಏರಿಕೆ ಮಾಡಿರುವುದು ಖಂಡನೀಯ. ಈ ಹಿನ್ನೆಲೆಯಲ್ಲಿ ಫೆ.24ರಂದು ವಿದ್ಯುತ್‌ ಗುತ್ತಿಗೆದಾರರ ಸಂಘ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಇದಕ್ಕೆ ರೈತ ಸಂಘ ಸಂಪೂರ್ಣ ಬೆಂಬಲ ನೀಡಲಿದೆ. ಈ ಮೂಲಕ ದರ ಪರಿಶೀಲನೆಗೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಬಿ – ಖಾತೆ ಅಭಿಯಾನಕ್ಕೆ ಶಾಸಕ ಪ್ರದೀಪ್‌ ಈಶ್ವರ್‌ ಚಾಲನೆ; ಮೊದಲ ದಿನ 716 ಅರ್ಜಿಗಳು ಸ್ವೀಕಾರ

ಸುದ್ದಿಗೋಷ್ಠಿಯಲ್ಲಿ ವಿದ್ಯುತ್‌ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆಂಜಿನಪ್ಪ, ಭೈರೆಡ್ಡಿ, ಮುನಿರಾಜು, ಬಸವರಾಜು, ಮಂಜುನಾಥ್‌, ಪ್ರಸಾದ್‌, ನವೀನ್‌ ಹಾಗೂ ರೈತ ಸಂಘದ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...