‌ಅವಧಿಗೂ ಮುನ್ನ ಮೆಟ್ರೋ ಪ್ರವೇಶ ದ್ವಾರ ಕ್ಲೋಸ್; ವಿಡಿಯೋ ಹಂಚಿಕೊಂಡ ಪ್ರಯಾಣಿಕ

Date:

ಬೆಂಗಳೂರು ನಗರದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಭದ್ರತಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪರದಾಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ನಿಗದಿತ ಸಮಯಕ್ಕೂ ಮುನ್ನವೇ ಪ್ರವೇಶ ದ್ವಾರವನ್ನು ಮುಚ್ಚಿದ ಭದ್ರತಾ ಸಿಬ್ಬಂದಿಯ ಜತೆ ಪ್ರಯಾಣಿಕರೊಬ್ಬರು ವಾಗ್ವಾದ ನಡೆಸಿದ್ದು, ಎಕ್ಸ್‌ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

- Advertisement -

ರಾತ್ರಿ 10 ಗಂಟೆಯ ಸುಮಾರಿಗೆ ರಂಜಿತ್ ಎನ್ನುವ ಪ್ರಯಾಣಿಕರು ಅತ್ತಿಗುಪ್ಪೆ ಮೆಟ್ರೋದಿಂದ ಇಂದಿರಾನಗರಕ್ಕೆ ತೆರಳಬೇಕಿತ್ತು. ಆದರೆ ಮೆಟ್ರೋ ನಿಲ್ದಾಣದ ಗೇಟ್ ‘ಎ’ ಭಾಗದಲ್ಲಿ ಭದ್ರತಾ ಸಿಬ್ಬಂದಿ ಸ್ಕ್ಯಾನರ್ ತೆರವುಗೊಳಿಸಿ, ಗೇಟ್ ಮುಚ್ಚಿರುವುದರಿಂದ ಅವರಿಗೆ ಒಳಗೆ ಪ್ರವೇಶ ನಿರಾಕರಿಸಲಾಗಿದೆ. ಅವಧಿ ಮುಗಿಯುವ ಮೊದಲು ಪ್ರವೇಶ ನಿರಾಕರಣೆ ಮಾಡಿದ ಬಗ್ಗೆ ರಂಜಿತ್ ಪ್ರಶ್ನಿಸಿದಾಗ ಭದ್ರತಾ ಸಿಬ್ಬಂದಿ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಸ್ಥಳದಲ್ಲಿದ್ದ ಇತರ ಪ್ರಯಾಣಿಕರೂ ಸಹ ಭದ್ರತಾ ಸಿಬ್ಬಂದಿಯ ವರ್ತನೆಗೆ ವಿರೋಧ ವ್ಯಕ್ತಪಡಿಸಿದ್ದು, ವಿಡಿಯೋ ವೈರಲ್‌ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...